ಉಡುಪಿ: ಹಲವು ಕಡೆಗಳಲ್ಲಿ ನಡೆದ ಅಡಿಕೆ ಕಳವು ಪ್ರಕರಣಗಳಿಗೆ ಸಂಬಂಧಿಸಿ ಶಂಕರನಾರಾಯಣ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕುಂದಾಪುರ ಗುಲ್ವಾಡಿ ಗ್ರಾಮದ ಅಮೀರ್ ಝೈನುದ್ದೀನ್ (23), ಭಟ್ಕಳ ಬಿಳಲಖಂಡ ಗ್ರಾಮದ ಮುನಾವರ್(21), ಭಟ್ಕಳ ಉಸ್ಮಾನ್ ನಗರದ ನಿಸಾರ್ ಆಸೀಫ್ ಅನ್ನಾರ್(24) ಎಂದು ಗುರುತಿಸಲಾಗಿದೆ. ಬಂಧಿತರು ಶಂಕರನಾರಾಯಣ ವ್ಯಾಪ್ತಿಯ ಹಾಲಾಡಿ ಮತ್ತು ಕ್ರೂಡ ಬೈಲೂರು, ಕೊಲ್ಲೂರು ಠಾಣಾ ವ್ಯಾಪ್ತಿಯ ಜಡ್ಕಲ್ ಹಾಗೂ ಗಂಗೊಳ್ಳಿ ಠಾಣಾ ವ್ಯಾಪ್ತಿಯ ನೂಜಾಡಿ ಎಂಬಲ್ಲಿ ನಡೆದ ಅಡಿಕೆ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದರು. ಬಂಧಿತರಿಂದ 11.25 ಕ್ವಿಂಟಾಲ್ ಸಿಪ್ಪೆಅಡಿಕೆ, 40ಕೆ.ಜಿ. ಒಣ ಅಡಿಕೆ, ಮತ್ತು ಕೃತ್ಯಕ್ಕೆ ಬಳಸಿದ್ದ ಪಿಕ್‌ಆಪ್ ವಾಹನ ಹಾಗೂ ಸ್ಕೂಟರ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇವುಗಳ ಒಟ್ಟು ಮೌಲ್ಯ 4,05,750ರೂ. ಅಂದಾಜಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…