ಉಡುಪಿ: ಅಣ್ಣ ತಮ್ಮನ ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ. ಕ್ಷುಲ್ಲಕ ಕಾರಣಕ್ಕಾಗಿ ತಮ್ಮ ತನ್ನ ಅಣ್ಣನನ್ನೇ ದೊಣ್ಣೆಯಿಂದ ಹೊಡೆದು ಕೊಲೆಗೈದಿದ್ದಾನೆ.
ಹೆಬ್ರಿ ತಾಲೂಕಿನ ನಾಲ್ಕೂರು ಗ್ರಾಮದ ಕಜ್ಕೆ ಅರಮನೆ ಜೆಡ್ಡು ಎಂಬಲ್ಲಿ ಈ ಘಟನೆ ನಡೆದಿದೆ.
ಮೃತರನ್ನು ನಾಲ್ಕೂರು ಗ್ರಾಮದ ಕಜ್ಕೆ ಅರಮನೆಜೆಡ್ಡು ನಿವಾಸಿ ಗುಲಾಬಿ ಎಂಬವರ ಮಗ ಮಂಜುನಾಥ (೩೫) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ, ಮೃತರ ತಮ್ಮ ವಿಶ್ವನಾಥ್ (೩೦) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕೂಲಿ ಕೆಲಸ ಮಾಡಿಕೊಂಡಿದ್ದ ಮಂಜುನಾಥ ಮತ್ತು ವಿಶ್ವನಾಥ ಒಂದೇ ಮನೆಯಲ್ಲಿ ವಾಸವಾಗಿದ್ದರು. ಆಗಾಗ ಇವರ ಮಧ್ಯೆ ಗಲಾಟೆ ಆಗುತ್ತಿದ್ದು, ಮಧ್ಯರಾತ್ರಿ ವೇಳೆ ಮಂಜುನಾಥ, ತನ್ನ ತಮ್ಮ ವಿಶ್ವನಾಥನನ್ನು ಉದ್ದೇಶಿಸಿ, ನನ್ನ ಹೆಂಡತಿ ಮನೆ ಬಿಟ್ಟು ಹೋಗಲು ನೀನೇ ಕಾರಣವೆಂದು ಹೇಳಿದನು. ಇದೇ ವಿಚಾರದಲ್ಲಿ ವಿಶ್ವನಾಥ ಕೋಪ ಗೊಂಡು ಛಾವಣಿಯಲ್ಲಿದ್ದ ದೊಣ್ಣೆಯಿಂದ ಮಂಜುನಾಥ ಅವರ ತಲೆಗೆ ಬಲವಾಗಿ ಹೊಡೆದಿದ್ದಾನೆ ಎನ್ನಲಾಗಿದೆ.
ಇದರ ಪರಿಣಾಮ ಮಂಜುನಾಥ್ ಅವರ ತಲೆಯಿಂದ ತೀವ್ರ ರಕ್ತ ಹರಿದು ಸ್ಥಳದಲ್ಲಿಯೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಸ್ಥಳಕ್ಕೆ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪರಮೇಶ್ವರ ಹೆಗಡೆ, ಕರ‍್ಕಳ ಡಿವೈಎಸ್ಪಿ ಅರವಿಂದ ಕಲಗುಜ್ಜಿ, ಕರ‍್ಕಳ ವೃತ್ತ ನಿರೀಕ್ಷಕ ಮಂಜಪ್ಪ ಡಿ.ಆರ್., ಹೆಬ್ರಿ ಪೊಲೀಸ್ ಠಾಣಾಧಿಕಾರಿ ಮಹೇಶ ಟಿ.ಎಂ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…
ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…
ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…
‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…
ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…