ಕರಾವಳಿ

ಸುರತ್ಕಲ್ : ಎನ್. ಐ . ಟಿ . ಕೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ

ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನ ಹಾಗೂ ಮನೋವಿಕಸನದ ದೃಷ್ಟಿಯಿಂದ ಎನ್. ಐ .ಟಿ .ಕೆ . ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 1/4/2024 ರಿಂದ 6/4/2024 ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನ ಹಾಗೂ ಮನೋವಿಕಸನದ ದೃಷ್ಟಿಯಿಂದ ಎನ್. ಐ .ಟಿ .ಕೆ . ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 1/4/2024 ರಿಂದ 6/4/2024 ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿ ಕೆ .ಆರ್ .ಇ .ಸಿ ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ , ಶ್ರೀಮತಿ ಲತಾ , ಶಾಲಾ ಪ್ರಾಂಶುಪಾಲೆ ಶ್ರೀಮತಿ ಪ್ರಮೀಳ ಹಾಗೂ ಹಿರಿಯ ಪ್ರಾಧ್ಯಾಪಕರಾದ ಶ್ರೀ ಸುಬ್ರಮಣ್ಯ ಭಟ್ ದೀಪ ಪ್ರಜ್ವಲನೆ ನೆರವೇರಿಸುವುದರ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿ ಶ್ರೀಮತಿ ಲತಾ ರವರು ಮಕ್ಕಳಿಗೆ ಪ್ರೋತ್ಸಾಹಕ ಮಾತುಗಳನ್ನಾಡುವ ಮೂಲಕ ಕ್ರಿಯಾತ್ಮಕವಾಗಿ ಭಾಗವಹಿಸಲು ಹುರಿದುಂಬಿಸಿದರು . ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಸಿಕ್ಕಂತಹ ಅವಕಾಶವನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳುವ ಮೂಲಕ ಮಕ್ಕಳಲ್ಲಿ ಸೃಜನಾತ್ಮಕ ಪ್ರತಿಭೆಯನ್ನು ಹೊರ ತರುವಲ್ಲಿ ಯಶಸ್ವಿಯಾಗಬೇಕೆಂದು ಮಕ್ಕಳಿಗೆ ಮನವರಿಕೆ ಮಾಡಿದರು . ಸಂಸ್ಕೃತ ವಿದ್ವಾನ್ ಸುಬ್ರಹ್ಮಣ್ಯ ಭಟ್ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು . ರಸ್ತೆ ಸುರಕ್ಷತೆಯ ಜಾಗೃತಿಯ ಕುರಿತು ಶಾಲಾ ಶಿಕ್ಷಕಿ ಶ್ರೀಮತಿ ಪ್ರಭಾವತಿಯವರು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿ , ರಸ್ತೆ ನಿಯಮದ ಪ್ರತಿಜ್ಞಾವಿಧಿಯನ್ನು ತೆಗೆದುಕೊಳ್ಳಲಾಯಿತು . ಕಲಾ ಶಿಕ್ಷಕಿ ಶ್ರೀಮತಿ ಗೀತಾ ರವರು ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿ ವನಿತಾ ರವರು ಹಾಗೂ ಚಿತ್ರಕಲಾ ಶಿಕ್ಷಕರಾದ ಶ್ರೀ ಧನಂಜಯ್ . ಬಿ ಅವರು ವಂದನಾರ್ಪಣೆಗೈದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…

4 hours ago

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…

4 hours ago

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…

4 hours ago

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…

4 hours ago

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…

4 hours ago

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…

4 hours ago