ಉಡುಪಿ: ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರನೋರ್ವ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಂದು ಮಧ್ಯಾಹ್ನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ಭೀಕರ ಘಟನೆ ನಡೆದಿದೆ. ಮೃತ ಸವಾರನನ್ನು ಗಂಗೊಳ್ಳಿ ಪೋಸ್ಟ್ ಆಫೀಸ್ ಬಳಿ ನಿವಾಸಿ ಅಬ್ದುಲ್ ಖಾದರ್ ಎಂಬುವರ ಮಗ ಮೊಹಮ್ಮದ್ ಕಾಶಿಫ್ (17) ಎಂದು ಗುರುತಿಸಲಾಗಿದೆ. ಗಂಗೊಳ್ಳಿ ಪೋಸ್ಟ್ ಆಫೀಸ್ ಬಳಿ ನಿವಾಸಿ ಮೊಹಮ್ಮದ್ ಫೈಜ್ (14) ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಗಸ್ತು ವಾಹನ ಸ್ಥಳಕ್ಕಾಗಮಿಸಿ ರಸ್ತೆ ಸಂಚಾರ ಸುಗಮಗೊಳಿಸಿತು. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…