ಜನ ಮನದ ನಾಡಿ ಮಿಡಿತ

Advertisement

ಉಡುಪಿ ಜೆಡಿಎಸ್ ಕಚೇರಿಗೆ ಚಿಕ್ಕಮಗಳೂರು-ಉಡುಪಿ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಭೇಟಿ

ಉಡುಪಿ: ಲೋಕಸಭಾ ಚುನಾವಣೆಯನ್ನು ಬಿಜೆಪಿ ಜೆಡಿಎಸ್ ಮೈತ್ರಿಯ ಮೂಲಕ ಎದುರಿಸಲು ಸನ್ನದ್ಧವಾಗಿರುವ ಸಂದರ್ಭದಲ್ಲಿ ಇದಕ್ಕೆ ಮುನ್ನುಡಿ ಎಂಬಂತೆ ಕಾಪುವಿನ ಜೆಡಿಎಸ್‌ ಕಚೇರಿಗೆ ಉಡುಪಿ ಚಿಕ್ಕಮಗಳೂರು ಮೈತ್ರಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಶನಿವಾರ ಭೇಟಿ ನೀಡಿದರು.


ಜೆಡಿಎಸ್‌ ಜಿಲ್ಲಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಅವರು ಬಿಜೆಪಿ ಪಕ್ಷದ ಪ್ರಮುಖರನ್ನು ಆತ್ಮೀಯವಾಗಿ ಬರಮಾಡಿಕೊಂಡು ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಅವರನ್ನು ಗೌರವಿಸಿದರು
ಈ ಸಂದರ್ಭ ಜೆಡಿಎಸ್ ಪ್ರಮುಖರು ಈ ಬಾರಿಯ ಚುನಾವಣೆಯನ್ನು ಮೈತ್ರಿಯ ಮೂಲಕ ಎದುರಿಸುವ ಭರವಸೆ ನೀಡಿ, ಪಡುಬಿದ್ರಿ ಚಿಕ್ಕಮಗಳೂರು ರೈಲ್ವೆ ಯೋಜನೆ ಬಗೆಯೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯ ಗಮನ ಸೆಳೆದರು.
ಜೆಡಿಎಸ್ ಪ್ರಮುಖರಾದ ವಾಸುದೇವ ರಾವ್, ಗಂಗಾಧರ ಭಿರ್ತಿ, ವೆಂಕಟೇಶ್, ಅಶ್ರಫ್, ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ನವೀನ್ ಶೆಟ್ಟಿ ಕುತ್ಯಾರು, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪ್ರವೀಣ್ ಕುಮಾ‌ರ್, ಸತೀಶ್ ಉದ್ಯಾವರ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!