ಉಡುಪಿ: ಲೋಕಸಭಾ ಚುನಾವಣೆಯನ್ನು ಬಿಜೆಪಿ ಜೆಡಿಎಸ್ ಮೈತ್ರಿಯ ಮೂಲಕ ಎದುರಿಸಲು ಸನ್ನದ್ಧವಾಗಿರುವ ಸಂದರ್ಭದಲ್ಲಿ ಇದಕ್ಕೆ ಮುನ್ನುಡಿ ಎಂಬಂತೆ ಕಾಪುವಿನ ಜೆಡಿಎಸ್ ಕಚೇರಿಗೆ ಉಡುಪಿ ಚಿಕ್ಕಮಗಳೂರು ಮೈತ್ರಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಶನಿವಾರ ಭೇಟಿ ನೀಡಿದರು.
ಜೆಡಿಎಸ್ ಜಿಲ್ಲಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಅವರು ಬಿಜೆಪಿ ಪಕ್ಷದ ಪ್ರಮುಖರನ್ನು ಆತ್ಮೀಯವಾಗಿ ಬರಮಾಡಿಕೊಂಡು ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಅವರನ್ನು ಗೌರವಿಸಿದರು
ಈ ಸಂದರ್ಭ ಜೆಡಿಎಸ್ ಪ್ರಮುಖರು ಈ ಬಾರಿಯ ಚುನಾವಣೆಯನ್ನು ಮೈತ್ರಿಯ ಮೂಲಕ ಎದುರಿಸುವ ಭರವಸೆ ನೀಡಿ, ಪಡುಬಿದ್ರಿ ಚಿಕ್ಕಮಗಳೂರು ರೈಲ್ವೆ ಯೋಜನೆ ಬಗೆಯೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯ ಗಮನ ಸೆಳೆದರು.
ಜೆಡಿಎಸ್ ಪ್ರಮುಖರಾದ ವಾಸುದೇವ ರಾವ್, ಗಂಗಾಧರ ಭಿರ್ತಿ, ವೆಂಕಟೇಶ್, ಅಶ್ರಫ್, ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ನವೀನ್ ಶೆಟ್ಟಿ ಕುತ್ಯಾರು, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪ್ರವೀಣ್ ಕುಮಾರ್, ಸತೀಶ್ ಉದ್ಯಾವರ ಮತ್ತಿತರರು ಉಪಸ್ಥಿತರಿದ್ದರು.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…