ಪುತ್ತೂರು: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರು ಸೋಮವಾರ ಪುತ್ತೂರಿನ ಚುನಾವಣಾ ಪ್ರಚಾರಕ್ಕೆ ಗೆಜ್ಜೆಗಿರಿ ನಂದನ ಬಿತ್ತ್’ಲ್ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸಿ ಆರಂಭಿಸಿದರು.
ಗೆಜ್ಜೆಗಿರಿ ಕ್ಷೇತ್ರದ ಆದಿದೈವ ದೂಮಾವತಿ ನಡೆಯಲ್ಲಿ ಪ್ರಾರ್ಥಿಸಿ, ಸತ್ಯಧರ್ಮ ಚಾವಡಿಯಲ್ಲಿ ದೇಯಿ ಬೈದೆತಿ ಸಾನಿಧ್ಯದಲ್ಲಿ ಪ್ರಸಾದ ಸ್ವೀಕರಿಸಿದರು. ಪಡುಮಲೆ ಪೂಮಾಣಿ, ಕಿನ್ನಿಮಾಣಿ, ವ್ಯಾಘ್ರ ಚಾಮುಂಡಿ ಕ್ಷೇತ್ರಕ್ಕೆ ತೆರಳಿ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು. ಪಡುಮಲೆ ನಾಗ ಬೆರ್ಮೆರ್ ಗುಡಿ, ನಾಗ ಸಾನಿಧ್ಯಕ್ಕೆ ತೆರಳಿ, ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭ ಪುತ್ತೂರು ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿ ಕಾವು ಹೇಮನಾಥ ಶೆಟ್ಟಿ, ಜಿಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಗೆಜ್ಜೆಗಿರಿ ಕ್ಷೇತ್ರದ ಗೌರವಾಧ್ಯಕ್ಷ ಜಯಂತ ನಡುಬೈಲು, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್, ಕ್ಷೇತ್ರದ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ವಿಜಯ್ ಕುಮಾರ್ ಸೊರಕೆ, ಮಹೇಶ್ಚಂದ್ರ ಸಾಲ್ಯಾನ್, ಶ್ರೀಪ್ರಸಾದ್ ಪಾಣಾಜೆ, ಕಮಲೇಶ್ ಸರ್ವೆದೋಳಗುತ್ತು, ಅಣಿಲೆ ಜೈರಾಜ್ ಶೆಟ್ಟಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಶ್ ಗಬ್ಬಲಡ್ಕ, ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಮಾಧವ ಸಾಲ್ಯಾನ್ ಕುರೆಮಜಲು, ಡಿಸಿಸಿ ಸದಸ್ಯ ಅಶೋಕ್ ಕುಮಾರ್ ಸಂಪ್ಯ, ಕ್ಷೇತ್ರದ ಧರ್ಮದರ್ಶಿ ಶ್ರೀಧರ ಪೂಜಾರಿ ಮೊದಲಾದರು ಉಪಸ್ಥಿತರಿದ್ದರು.
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…