ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಏ.3ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಬಿ.ರಮಾನಾಥ ರೈ ಹೇಳಿದರು.
ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬೆಳಗ್ಗೆ 9.30ಕ್ಕೆ ಕುದ್ರೋಳಿ ದೇವಸ್ಥಾನದಿಂದ ಮೆರವಣಿಗೆಯಲ್ಲಿ ಹೊರಟು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಾಗುವುದು. ಕಾಂಗ್ರೆಸ್ ಕಾರ್ಯಕರ್ತರು ಈ ಸಂದರ್ಭ ಭಾಗವಹಿಸುವರು ಎಂದು ತಿಳಿಸಿದರು
ಕಾಂಗ್ರೆಸ್ ಬಡ, ಹಿಂದುಳಿದ ವರ್ಗದವರ ಪಕ್ಷವಾಗಿದ್ದು, ಸಾಮಾಜಿಕ ನ್ಯಾಯಕ್ಕಾಗಿ ದುಡಿಯುತ್ತಿದೆ. ಕಾಂಗ್ರೆಸ್ ಸಂಸದರ ಕಾಲದಿಂದ ಜಿಲ್ಲೆಯ ಅಭಿವೃದ್ಧಿಯ ಚಿತ್ರಣ ಬದಲಾಗಿದ್ದು, ಮೂರು ದಶಕಗಳಿಂದ ಬಿಜೆಪಿ ಸಂಸದರು ಗೆಲ್ಲುವ ಮೂಲಕ ಯಾವುದೇ ಅಭಿವೃದ್ಧಿಯಾಗಿಲ್ಲ ಎಂದು ಟೀಕಿಸಿದರು.
ಈ ಸಂದರ್ಭ ಮುಡಾ ಮಾಜಿ ಅಧ್ಯಕ್ಷ ಇಬ್ರಾಹಿಂ ಕೊಡಿಜಾಲ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಕಾರ್ಪೊರೇಟರ್‌ಗಳಾದ ಶಶಿಧರ್ ಹೆಗ್ಡೆ, ನವೀನ್ ಡಿಸೋಜ, ಮಾಜಿ ಮೇಯರ್ ಮಹಾಬಲ ಮಾರ್ಲ, ಪದ್ಮನಾಭ ಕೋಟ್ಯಾನ್, ಟಿ.ಕೆ.ಸುಧೀರ್, ಜಯಶೀಲ ಅಡ್ಯಂತಾಯ ಮತ್ತಿತರರು ಉಪಸ್ಥಿತರಿದ್ದರು.
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…