ಕಾಂಗ್ರೆಸ್ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ವಾಗ್ದಾಳಿ ಮಂಗಳೂರು: ಮಹಿಳಾ ಶಕ್ತಿಯನ್ನು ಅವಮಾನಿಸಿ ಅಗೌರವಿಸುವುದೇ ಕಾಂಗ್ರೆಸ್ ಸಂಸ್ಕೃತಿ ಎಂದು ಬಿಜೆಪಿ ಮಹಿಳಾ ಮೋರ್ಚಾ ವಾಗ್ದಾಳಿ ನಡೆಸಿದೆ.
ಇಂದು ಪಕ್ಷದ ಲೋಕಸಭಾ ಚುನಾವಣೆ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ರಾವ್ ಅವರು, ಕಾಂಗ್ರೆಸ್‌ನ ಹಿರಿಯ ಮುಖಂಡ ಹಾಗೂ ಸಚಿವ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ಧೇಶ್ವರ ಅವರ ಬಗ್ಗೆ ಆಡಿದ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿದರು.
ಗಾಯತ್ರಿ ಸಿದ್ದೇಶ್ವರ ಅಡುಗೆ ಮಾಡುವುದಕ್ಕಷ್ಟೇ ಲಾಯಕ್ಕು ಎಂದು ಶಾಮನೂರು ಶಿವಶಂಕರಪ್ಪ ನೀಡಿದ ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗಿದೆ.
ಕಾಂಗ್ರೆಸ್ ಸರಕಾರ ಬಂದಾಗಲೆಲ್ಲ ಮಹಿಳೆಯರಿಗೆ ಅವಮಾನ, ಅತ್ಯಾಚಾರದಂತಹ ಕೃತ್ಯಗಳು ಹೆಚ್ಚಾಗುತ್ತವೆ. ಅಂತಹ ದುರುಳರಿಗೆ ಕಾಂಗ್ರೆಸ್ ಸರಕಾರದ ಶ್ರೀರಕ್ಷೆ ಇರುವುದು ಇಂತಹ ಕೃತ್ಯಗಳು ಹೆಚ್ಚಲು ಕಾರಣ ಮಂಜುಳಾ ರಾವ್ ಹೇಳಿದರು.
ಮಹಿಳೆಯರು ಅಡುಗೆ ಮನೆಗೆ ಮಾತ್ರ ಸೀಮಿತವಾಗಿಲ್ಲ. ಶಾಸನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರ ಮೀಸಲಾತಿ ನೀಡಿರುವುದು ಬಿಜೆಪಿ ಸರಕಾರ. ಹಿಂದೆ ವಿದೇಶಾಂಗ ಸಚಿವೆಯಾಗಿ ಅತ್ಯಂತ ಸಮರ್ಥವಾಗಿ ಕೆಲಸ ಮಾಡಿದವರು ಸುಷ್ಮಾ ಸ್ವರಾಜ್ ಬಿಜೆಪಿ ನಾಯಕಿಯಾಗಿದ್ದರು. ಅತ್ಯಂತ ಹಿಂದುಳಿದ ಬುಡಕಟ್ಟು ಸಮುದಾಯಕ್ಕೆ ಮಹಿಳೆಯೊಬ್ಬರನ್ನು ರಾಷ್ಟ್ರಪತಿ ಹುದ್ದೆಗೆ ಆಯ್ಕೆ ಮಾಡಿರುವುದು ಬಿಜೆಪಿ ಎಂದು ಈ ಸಸಂದರ್ಭದಲ್ಲಿ ಅವರು ನೆನಪಿಸಿದರು.
ಮಹಿಳೆಯರಿಗೆ ಬಿಜೆಪಿ ಉತ್ತಮ ಅವಕಾಶಗಳು ಮತ್ತು ಜವಾಬ್ದಾರಿಯನ್ನು ನೀಡಿದೆ. ಆದರೆ ಕಾಂಗ್ರೆಸ್ ಮಹಿಳೆಯನ್ನು ಅವಮಾನಿಸುತ್ತಿದೆ ಎಂದು ಅವರು ಹರಿಹಾಯ್ದರು.
ಕಾಂಗ್ರೆಸ್ ಸರಕಾರ ಗೃಹಲಕ್ಷ್ಮಿ ಹೆಸರಿನ ಯೋಜನೆ ತಂದಿದ್ದರೂ ಅದನ್ನು ಸಮರ್ಥವಾಗಿ ಜಾರಿ ಮಾಡಿಲ್ಲ. ಅಷ್ಟಕ್ಕೂ ಕುಟುಂಬದ ಪುರುಷರ ಆದಾಯಕ್ಕೇ ಕತ್ತರಿ ಹಾಕಿ ಅದನ್ನೇ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಮೂಲಕ ನೀಡಿ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿರುವುದು ಕಾಂಗ್ರೆಸ್ ಸರಕಾರ ಎಂದು ಅವರು ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಂಧ್ಯಾ ವೆಂಕಟೇಶ್, ಉಪ ಮೇಯರ್ ಸುನೀತಾ,, ಜಿಲ್ಲಾ ಕಾರ್ಯದರ್ಶಿ ಪೂರ್ಣಿಮಾ, ಕೋಶಾಧಿಕಾರಿ ಸುಮನ ಶರಣ್ ಹಾಗೂ ಅಶಿತಾ ಶೆಟ್ಟಿ ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…