ಇತರೆ

ಬಲಿಷ್ಠ ಭಾರತ ನಿರ್ಮಾಣದಲ್ಲಿ ವಕೀಲರ ಸಮುದಾಯದ ಪಾತ್ರ ದೊಡ್ಡದು: ಪ್ರತಾಪ್ ಸಿಂಹ ನಾಯಕ್

ಮಂಗಳೂರು: ಸುಭದ್ರ ಮತ್ತು ಸಮೃದ್ಧ ದೇಶವನ್ನು ಕಟ್ಟುವಲ್ಲಿ ವಕೀಲರ ಪಾತ್ರ ಅತ್ಯಂತ ಮಹತ್ವದ್ದು ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹೇಳಿದರು.

ವಕೀಲರ ಮಾತಿಗೆ ಸಮಾಜದಲ್ಲಿ ತೂಕ ಹೆಚ್ಚು. ಅವರ ಸಲಹೆಗಳನ್ನು ಮೀರುವ ವ್ಯಕ್ತಿಗಳು ಯಾರೂ ಇಲ್ಲ. ಭಾರತದ ಸ್ವಾತಂತ್ರ್ಯ ಹೋರಾಟ ಕಾಲದಲ್ಲಿ ಸಾವಿರಾರು ವಕೀಲರು ದಿಟ್ಟತನದಿಂದ ಕಾರ್ಯನಿರ್ವಹಿಸಿದ್ದರ ಫಲವಾಗಿಯೇ ಸ್ವಾತಂತ್ರ್ಯದ ಕಿಚ್ಚು ಎಲ್ಲೆಡೆ ಹಬ್ಬಿತು. ಆ ಬಳಿಕ ತುರ್ತು ಪರಿಸ್ಥಿತಿಯ ಸಂದದರ್ಭದಲ್ಲಿ ಸಂವಿಧಾನದ ಆಡಳಿತದ ಮರುಸ್ಥಾಪನೆಗೆ ನಡೆದ ಹೋರಾಟದಲ್ಲೂ ವಕೀಲರ ಸಮುದಾಯದ ಪಾತ್ರ ಮಹತ್ವದ್ದಾಗಿದೆ. ಅಂತೆಯೇ ಈಗ ಸ್ವತಂತ್ರ ಭಾರತ ಇನ್ನೊಂದು ಮಹತ್ವದ ಮಜಲಿನಲ್ಲಿ ಬಂದು ನಿಂತಿದೆ. ಮುಂದಿನ 25 ವರ್ಷಗಳ ದೂರದೃಷ್ಟಿ ಇಟ್ಟುಕೊಂಡು ವಿಕಸಿತ ಭಾರತದ ಕನಸು ಕಾಣುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ವಕೀಲರ ಸಮುದಾಯ ತಮ್ಮ ಯೋಗದಾನವನ್ನು ನೀಡಬೇಕಿದೆ ಎಂದು ಪ್ರತಾಪ್ ಸಿಂಹ ನಾಯಕ್ ಹೇಳಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಿ. ವೇದವ್ಯಾಸ ಕಾಮತ್, ಪ್ರಧಾನಿ ಮೋದಿ ಅವರ ಆಡಳಿತದಲ್ಲಿ ದೇಶದಲ್ಲಿ ಆದ ಬದಲಾವಣೆಗಳು ಮತ್ತು ಅಭಿವೃದ್ಧಿಯ ಮಹಾ ಪರ್ವವನ್ನು ನೆನಪಿಸಿದರು. ಕಾಶ್ಮೀರದಲ್ಲಿ 370ನೇ ವಿಧಿ ರದ್ದುಪಡಿಸುವ ಮೂಲಕ ದಿಟ್ಟ ನಿರ್ಧಾರ ಕೈಗೊಂಡ ಪ್ರಧಾನಿ ಮೋದಿ, ಒಂದು ಕಾಲದಲ್ಲಿ ಹೆಸರು ಕೇಳಿದರೆ ಭಯಪಡುತ್ತಿದ್ದಂತಹ ಕಾಶ್ಮೀರದಲ್ಲಿ ಇಂದು ಪ್ರವಾಸೋದ್ಯಮದ ಮೂಲಕ ಅಭಿವೃದ್ಧಿಯ ಹೊಸ ಅಲೆ ಎದ್ದಿರುವುದನ್ನು ನೆನಪಿಸಿದರು. ಕಲ್ಲು, ಬಾಂಬುಗಳನ್ನು ಎಸೆಯುತ್ತಿದ್ದ ಯುವಕರ ಮನಃ ಪರಿವರ್ತನೆ ಮಾಡಿ, ಅವರ ಕೈಗಳಿಗೆ ಲ್ಯಾಪ್‌ಟಾಪ್ ಕೊಟ್ಟು, ಬದುಕಿನ ಹೊಸ ದಾರಿಗೆ ಅವಕಾಶ ಮಾಡಿಕೊಟ್ಟವರು ಪ್ರಧಾನಿ ಮೋದಿ ಎಂದು ಶ್ಲಾಘಿಸಿದರು.

ಕೊರೊನಾ ಕಾಲದಲ್ಲಿ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿದ್ದು, ರಷ್ಯಾ-ಉಕ್ರೇನ್ ಯುದ್ಧ ಸಂದರ್ಭದಲ್ಲಿ ಭಾರತೀಯರ ಸುರಕ್ಷಿತ ತೆರವು ಕಾರ್ಯಾಚರಣೆಗಳನ್ನು ಅವರು ಸ್ಮರಿಸಿದರು.

ವಕೀಲರ ಸಮುದಾಯ ತಮ್ಮ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಅವರ ಕೈಬಲಪಡಿಸುವ ನಿಟ್ಟಿನಲ್ಲಿ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಹಿರಿಯರಾದ ಮೋನಪ್ಪ ಭಂಡಾರಿ ಅವರು ವಕೀಲರ ಸಮುದಾಯಕ್ಕೆ ಮಾರ್ಗದರ್ಶನ ಮಾಡಿದರು.

ಸುಭದ್ರ, ಬಲಿಷ್ಠ ಭಾರತ ಕಟ್ಟುವಲ್ಲಿ ವಕೀಲರ ಪಾತ್ರ ಮಹತ್ವದ್ದು: ಕ್ಯಾಪ್ಟನ್ ಬೃಜೇಶ್ ಚೌಟ

ಮಂಗಳೂರು: ಸುಭದ್ರ ಮತ್ತು ಸಮೃದ್ಧ ದೇಶವನ್ನು ಕಟ್ಟುವಲ್ಲಿ ವಕೀಲರ ಪಾತ್ರ ಅತ್ಯಂತ ಮಹತ್ವದ್ದು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಲಿಷ್ಠ, ವಿಕಸಿತ ಭಾರತವನ್ನು ಕಟ್ಟಲು ವಕೀಲರ ಸಮುದಾಯ ಮಹತ್ವದ ಯೋಗದಾನ ನೀಡಬೇಕು ಎಂದು ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಹೇಳಿದರು.

ಅವರು ಬಿಜೆಪಿಯ ಜಿಲ್ಲಾ ಚುನಾವಣೆ ಕಾರ್ಯಾಲಯದಲ್ಲಿ ಸೋಮವಾರ ನಡೆದ ವಕೀಲರ ಪರಿಷತ್ ಸಭೆಯಲ್ಲಿ ಮಾತನಾಡಿದರು.

ವಕೀಲರು ಸಮಾಜದಲ್ಲಿ ಅತ್ಯಂತ ಗೌರವ ಮತ್ತು ಪ್ರತಿಷ್ಠೆಯನ್ನು ಹೊಂದಿದವರು. ಅವರ ಮಾತುಗಳನ್ನು ಯಾರೂ ಮೀರುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಲ್ಲಿ ವಿಕಸಿತ ಭಾರತವನ್ನು ನಿರ್ಮಿಸುವಲ್ಲಿ ವಕೀಲರ ಸಮುದಾಯ ಕೈಜೋಡಿಸಬೇಕು ಎಂದು ಅವರು ಕರೆ ನಿಡಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಶಾಸಕ ಡಿ ವೇದವ್ಯಾಸ ಕಾಮತ್, ಹಿರಿಯರಾದ ಮೋನಪ್ಪ ಭಂಡಾರಿ, ಶಂಭು ಶರ್ಮಾ, ಸುಧಾಕರ ಜೋಶಿ, ಪ್ರಕೋಷ್ಠಗಳ ಜಿಲ್ಲಾ ಸಂಚಾಲಕ ಪ್ರಸನ್ನ ದರ್ಭೆ ಮುಂತಾದ ಅನೇಕ ಗಣ್ಯರು ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…

14 hours ago

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…

14 hours ago

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…

2 days ago

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

  ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…

3 days ago

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…

3 days ago

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…

4 days ago