ಉಡುಪಿ: ನಗರದಲ್ಲಿ ತಾಪಮಾನ ದಿನೇ ದಿನೇ ಹೆಚ್ಚಾಗುತ್ತಿದ್ದು, ಬಿಸಿಲ ಧಗೆಯಿಂದ ಜನರು ಹೈರಣಾಗಿದ್ದಾರೆ.
ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದ್ದು, ಸಾರ್ವಜನಿಕರ ದಾಹ ತಣಿಸುವ ಉದ್ಧೇಶದಿಂದ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಹಾಗೂ ಜೋಸ್ ಆಲೂಕ್ಕಾಸ್ ಆಭರಣ ಮಳಿಗೆ ಜಂಟಿಯಾಗಿ ಮಾರುಥಿ ವೀಥಿಕಾದಲ್ಲಿ ಜಲ ಕುಟೀರ ಸ್ಥಾಪಿಸಿದೆ. ಇದರ ಉದ್ಘಾಟನಾ ಕಾರ್ಯಕ್ರಮವು ಇಂದು ನಡೆಯಿತು.
ಜಲಕುಟೀರವನ್ನು ಕಾನೂನು ಪ್ರಾಧಿಕಾರದ ಸದಸ್ಯೆ ಕಾರ್ಯದರ್ಶಿ ಶರ್ಮಿಳಾ ಎಸ್ ಹಾಗೂ ಪೌರಾಯುಕ್ತ ರಾಯಪ್ಪ ಅವರು ಅಯೋಧ್ಯೆಯಲ್ಲಿ ಬಾಲರಾಮನಿಗೆ ಅಭಿಷೇಕಕ್ಕೆ ಉಪಯೋಗಿಸಿದ ಬೆಳ್ಳಿಯ ಕಳಶದ ಮೂಲಕ ನೀರನ್ನು ಸಾರ್ವಜನಿಕರಿಗೆ ವಿತರಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭ ನಾಗರೀಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ಉಡುಪಿ ಜೋಸ್ ಆಲೂಕ್ಕಾಸ್ ಆಭರಣ ಮಳಿಗೆಯ ವ್ಯವಸ್ಥಾಪಕ ರಾಜೇಶ್ ಏನ್. ಆರ್, ಗೋಪಾಲ್, ಉದ್ಯಮಿ ಉದಯ ಕುಮಾರ್, ಮೊದಲಾದವರು ಉಪಸ್ಥಿತರಿದ್ದರು.
ಶುದ್ಧ ಕುಡಿಯುವ ನೀರನ್ನು, ಸದಾ ತಂಪಾಗಿಡುವ ಮೃತ್ತಿಕೆಯ ಹೂಜಿಯಲ್ಲಿ ಸಂಗ್ರಹಿಸಿಡಲಾಗುತ್ತದೆ. ಬಿಸಿಲಿನ ಧಗೆಯಿಂದ ಬಳಲಿದವರಿಗೆ ದಾಹ ತಣಿಸಲು ಇಲ್ಲಿಯ ಜಲಕುಟೀರದಿಂದ ಅನುಕೂಲವಾಗಲಿದೆ. ಈ ಯೋಜನೆ ಮಳೆಗಾಲ ಬರುವರೆಗೆ ಮುಂದುವರಿಯಲಿದೆ ಎಂದು ನಾಗರಿಕ ಸಮಿತಿಯ ನಿತ್ಯಾನಂದ ಒಳಕಾಡು ತಿಳಿಸಿದ್ದಾರೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…