ಜನ ಮನದ ನಾಡಿ ಮಿಡಿತ

Advertisement

ಸುರತ್ಕಲ್ : ಎನ್. ಐ . ಟಿ . ಕೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ.

ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನ ಹಾಗೂ ಮನೋವಿಕಸನದ ದೃಷ್ಟಿಯಿಂದ ಎನ್. ಐ .ಟಿ .ಕೆ . ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿ ಕೆ .ಆರ್ .ಇ .ಸಿ ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ , ಶ್ರೀಮತಿ ಲತಾ , ಶಾಲಾ ಪ್ರಾಂಶುಪಾಲೆ ಶ್ರೀಮತಿ ಪ್ರಮೀಳ ಹಾಗೂ ಹಿರಿಯ ಪ್ರಾಧ್ಯಾಪಕರಾದ ಶ್ರೀ ಸುಬ್ರಮಣ್ಯ ಭಟ್ ದೀಪ ಪ್ರಜ್ವಲನೆ ನೆರವೇರಿಸುವುದರ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿ ಶ್ರೀಮತಿ ಲತಾ ರವರು ಮಕ್ಕಳಿಗೆ ಪ್ರೋತ್ಸಾಹಕ ಮಾತುಗಳನ್ನಾಡುವ ಮೂಲಕ ಕ್ರಿಯಾತ್ಮಕವಾಗಿ ಭಾಗವಹಿಸಲು ಹುರಿದುಂಬಿಸಿದರು . ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಸಿಕ್ಕಂತಹ ಅವಕಾಶವನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳುವ ಮೂಲಕ ಮಕ್ಕಳಲ್ಲಿ ಸೃಜನಾತ್ಮಕ ಪ್ರತಿಭೆಯನ್ನು ಹೊರ ತರುವಲ್ಲಿ ಯಶಸ್ವಿಯಾಗಬೇಕೆಂದು ಮಕ್ಕಳಿಗೆ ಮನವರಿಕೆ ಮಾಡಿದರು . ಸಂಸ್ಕೃತ ವಿದ್ವಾನ್ ಸುಬ್ರಹ್ಮಣ್ಯ ಭಟ್ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು . ರಸ್ತೆ ಸುರಕ್ಷತೆಯ ಜಾಗೃತಿಯ ಕುರಿತು ಶಾಲಾ ಶಿಕ್ಷಕಿ ಶ್ರೀಮತಿ ಪ್ರಭಾವತಿಯವರು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿ , ರಸ್ತೆ ನಿಯಮದ ಪ್ರತಿಜ್ಞಾವಿಧಿಯನ್ನು ತೆಗೆದುಕೊಳ್ಳಲಾಯಿತು . ಕಲಾ ಶಿಕ್ಷಕಿ ಶ್ರೀಮತಿ ಗೀತಾ ರವರು ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿ ವನಿತಾ ರವರು ಹಾಗೂ ಚಿತ್ರಕಲಾ ಶಿಕ್ಷಕರಾದ ಶ್ರೀ ಧನಂಜಯ್ . ಬಿ ಅವರು ವಂದನಾರ್ಪಣೆಗೈದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!