ಭಾರತ ಚುನಾವಣಾ ಆಯೋಗದ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ್ IAS ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂತ್ ಸಂಖ್ಯೆ 17 ಮತ್ತು 18ಕ್ಕೆ ಭೇಟಿ ನೀಡಿದರು.
ಧ್ಯೇಯ ಆಧಾರಿತ ಪರಿಕಲ್ಪನೆಯಡಿ ನಿರ್ಮಾಣವಾಗುತ್ತಿರುವ ಬೂತ್ ಸಂಖ್ಯೆ 17ರನ್ನು ವೀಕ್ಷಿಸಿ ತಾವೂ ಬಣ್ಣ ಹಚ್ಚಿ ಮೆಚ್ಚುಗೆ ವ್ಯಕ್ತಪಡಿಸಿದರು. ಬಳಿಕ ಶೌಚಾಲಯ, ಕುಡಿಯುವ ನೀರು, ರ್ಯಾಂಪ್ ವ್ಯವಸ್ಥೆ ಪರಿಶೀಲಿಸಿ ಮತದಾನದ ದಿನದಂದು ಮತದಾರರಿಗೆ ಅಗತ್ಯ ವ್ಯವಸ್ಥೆ ಕಲ್ಪಿಸಲು ಸೂಚಿಸಿದರು.
ಈ ವೇಳೆ ರಾಜ್ಯ ಮಟ್ಟದ ಮಾಸ್ಟರ್ ಟ್ರೈನರ್ ಪ್ರಮೀಳಾ, ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಲೋಕೇಶ್ ಸಿ., ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹಾಗೂ ತಾಲೂಕು ಸ್ವೀಪ್ ನೋಡಲ್ ಅಧಿಕಾರಿ ರಾಹುಲ್ ಕಾಂಬಳೆ, ತಾಲೂಕು ಪಂಚಾಯತ್ ಸಿಬ್ಬಂದಿ ಪ್ರಕಾಶ್, ಪಿಲಾತಬೆಟ್ಟು ಗ್ರಾಮ ಪಂಚಾಯತ್ ಎಸ್ಡಿಎ ಬಾಲಕೃಷ್ಣ, ತಾಲೂಕು ಐಇಸಿ ಸಂಯೋಜಕ ರಾಜೇಶ್, ಕಲಾ ಶಿಕ್ಷಕ ಧನಂಜಯ್, ಗ್ರಾಮ ಪಂಚಾಯತ್ ಸಿಬ್ಬಂದಿ ಇತರರು ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…