ಕರಾವಳಿ

ನಾನು ಮುಖ್ಯಮಂತ್ರಿ ಆಗಿರುವುದು, ಮೋದಿ ಪ್ರಧಾನಮಂತ್ರಿ ಆಗಿರುವುದಕ್ಕೆ ನಮ್ಮ ಸಂವಿಧಾನ ಕಾರಣ: ಸಿ.ಎಂ.ಸಿದ್ದರಾಮಯ್ಯ ಪ್ರತಿಪಾದನೆ

ನಾನು ಮುಖ್ಯಮಂತ್ರಿ ಆಗಿರುವುದು, ಮೋದಿ ಪ್ರಧಾನಮಂತ್ರಿ ಆಗಿರುವುದಕ್ಕೆ ನಮ್ಮ ಸಂವಿಧಾನ ಕಾರಣ: ಸಿ.ಎಂ.ಸಿದ್ದರಾಮಯ್ಯ ಪ್ರತಿಪಾದನೆ

ಬಿಜೆಪಿ ನಮ್ಮ ಈ ಸಂವಿಧಾನ ಬದಲಾವಣೆಯ ಅಜೆಂಡಾ ಇಟ್ಟುಕೊಂಡಿದೆ

ಮೋದಿ ಅವರ ಅವಧಿಯಲ್ಲಿ ಇಡೀ ದೇಶದಲ್ಲಿ ಸ್ಕಾಲರ್ ಶಿಪ್ ಗೆ ಯಾವ ಗತಿ ಆಯ್ತು ಅಂತ ನೋಡಿದ್ದೀರಲ್ಲಾ?

ಈ ಸಂವಿಧಾನ ಬದಲಾದರೆ ದೇಶದ ದಲಿತರು, ಶೂದ್ರರು, ಮಹಿಳೆಯರು ಮತ್ತು ಶ್ರಮಿಕ ವರ್ಗಗಳಿಗೆ ಉಳಿಗಾಲವಿಲ್ಲ: ಸಿ.ಎಂ

ನಮ್ಮ ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ: ಬಿಜೆಪಿಗೆ ನೇರ ನೇರಾ ಎಚ್ಚರಿಸಿದ ಸಿ.ಎಂ.ಸಿದ್ದರಾಮಯ್ಯ

ಮೈಸೂರು : ನಮ್ಮ ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ. ನಮ್ಮ ಸಂವಿಧಾನದ ಸ್ವರೂಪ ಬದಲಾಯಿಸಿ ದೇಶದ ದುಡಿಯುವ ವರ್ಗಗಳಿಗೆ ವಂಚಿಸಿದರೆ ದೇಶದ ಪರಿಸ್ಥಿತಿ ಬಿಗಡಾಯಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಗೆ ನೇರ ಎಚ್ಚರಿಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 45 ಕ್ಕೂ ಹೆಚ್ಚು ಮಂದಿ ಹೋಬಳಿ ಮಟ್ಟದ ಮುಖಂಡರುಗಳನ್ನು ಹಾಗೂ ಮಾಜಿ ಕೇಂದ್ರ ಸಚಿವ ಶ್ರೀನಿವಾಸ್ ಪ್ರಸಾದ್ ಅವರ ಆತ್ಮೀಯರು ಮತ್ತು ಸಂಬಂಧಿಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಮಾತನಾಡಿದರು.

ನಾನು ಮುಖ್ಯಮಂತ್ರಿ ಆಗಿರುವುದಕ್ಕೆ, ಮೋದಿ ಪ್ರಧಾನಮಂತ್ರಿ ಆಗಿರುವುದಕ್ಕೆ ನಮ್ಮ ಸಂವಿಧಾನ ಕಾರಣ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರತಿಪಾದಿಸಿದರು.

ಬಿಜೆಪಿ ನಮ್ಮ ಈ ಸಂವಿಧಾನ ಬದಲಾವಣೆಯ ಅಜೆಂಡಾ ಇಟ್ಟುಕೊಂಡಿದೆ. ಈ ಸಂವಿಧಾನ ಬದಲಾದರೆ ದೇಶದ ದಲಿತರು, ಶೂದ್ರರು, ಮಹಿಳೆಯರು ಮತ್ತು ಶ್ರಮಿಕ ವರ್ಗಗಳಿಗೆ ಉಳಿಗಾಲವಿಲ್ಲ. ಆದ್ದರಿಂದ ನಾವೆಲ್ಲಾ ಉಳಿಯಬೇಕಾದರೆ ಸಂವಿಧಾನ ಉಳಿಯಬೇಕು. ಸಂವಿಧಾನ ಉಳಿಯಬೇಕು ಎಂದರೆ ಬಿಜೆಪಿ ಸೋಲಬೇಕು ಎನ್ನುವ ಪಣ ತೊಡಿ ಎಂದರು.

ಮೋದಿ ಅವರ ಅವಧಿಯಲ್ಲಿ ಇಡೀ ದೇಶದಲ್ಲಿ ಸ್ಕಾಲರ್ ಶಿಪ್ ಗೆ ಯಾವ ಗತಿ ಆಯ್ತು ಅಂತ ನೋಡಿದ್ದೀರಲ್ಲಾ? ಮತ್ತೇಕೆ ಬಿಜೆಪಿ ಕಡೆ ಮುಖ ಮಾಡಬೇಕು ಎಂದು ಪ್ರಶ್ನಿಸಿದರು.

ಶೂದ್ರರಿಗೆ BJP-RSS ನ ಗರ್ಭಗುಡಿಯೊಳಗೆ ಪ್ರವೇಶವೇ ಇಲ್ಲ: ಸಿ.ಎಂ.ಎಚ್ಚರಿಕೆ

ಶೂದ್ರರಿಗೆ BJP-RSS ನ ಗರ್ಭಗುಡಿಯೊಳಗೆ ಪ್ರವೇಶವೇ ಇಲ್ಲ. ಶೂದ್ರರು, ದಲಿತರನ್ನು ಕೇವಲಿ ಬಳಸಿಕೊಳ್ಳುತ್ತಾರೆ ಆದರೆ RSS ನ ಒಳಗೆ ಪ್ರವೇಶ ಕೊಡುವುದಿಲ್ಲ. ಆದ್ದರಿಂದ RSS ಕಡೆಗೆ ತಲೆ ಕೂಡ ಹಾಕಬೇಡಿ ಎಂದು ಕರೆ ನೀಡಿದರು.

ಮಂಡಲ್ ವರದಿ ವೇಳೆ ಶೂದ್ರರು ಸಾವಿಗೆ ಕಾರಣರಾದವರು ಇವರೇ ತಾನೇ?

ದಲಿತರು, ಶೂದ್ರರು, ಹಿಂದುಳಿದವರ ವಿರೋಧಿಯಾದ BJP-RSS ಮೀಸಲಾತಿಯನ್ನೂ ವಿರೋಧಿಸುತ್ತದೆ. ಮಂಡಲ್ ವರದಿ ವೇಳೆ ಶೂದ್ರರು ಸಾವಿಗೆ ಕಾರಣರಾದವರು, ನಮ್ಮವರು ಬೆಂಕಿ ಹಚ್ಚಿಕೊಂಡು ಸಾಯುವಂತೆ ಮಾಡಿದವರು ಇವರೇ ತಾನೇ? ನಮ್ಮ ಶತ್ರುಗಳ ಜತೆಗೆ ಈ ದೇಶದ ಶೂದ್ರರು, ದಲಿತರು, ಹಿಂದುಳಿದವರು ಏಕೆ ಹೋಗಬೇಕು ಎಂದು ಪ್ರಶ್ನಿಸಿದರು.

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಾನು ಹಿಂದುವಾಗಿ ಸಾಯುವುದಿಲ್ಲ ಎಂದು ಹೇಳಿ ಬೌದ್ದ ಧರ್ಮಕ್ಕೆ ಹೋಗಿದ್ದಕ್ಕೆ ಮುಖ್ಯ ಕಾರಣ ಜಾತಿ ಅಸಮಾನತೆ, ಮತ್ತು ಸಾಮಾಜಿಕ ಅಸಮಾನತೆಯೇ ಕಾರಣ ಎಂದರು.

ರಾಷ್ಟ್ರಮಟ್ಟದಲ್ಲೂ ನಮ್ಮ ಕಾರ್ಯಕ್ರಮ ಜಾರಿ

ಕೇಂದ್ರದಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆಗಳು ಕಡಿಮೆ ಇದೆ. ನಾವು ಅಧಿಕಾರಕ್ಕೆ ಬಂದರೆ ನಾವು ರಾಜ್ಯದಲ್ಲಿ ತಂದಿರುವ ದಲಿತ ಮತ್ತು ಹಿಂದುಳಿದ ವರ್ಗಗಳ ಪರವಾದ ಕಾನೂನುಗಳನ್ನು ರಾಷ್ಟ್ರಮಟ್ಟದಲ್ಲೂ ಜಾರಿಗೆ ತರಲಾಗುವುದು. ಈ ಬಗ್ಗೆ ರಾಹುಲ್ ಗಾಂಧಿ ಅವರ ಜತೆಗೂ ಮಾತಾಡಿ ಪ್ರಣಾಳಿಕೆಯಲ್ಲಿ ಸೇರಿಸಲು ಹೇಳಿದ್ದೇನೆ ಎಂದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…

1 hour ago

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…

1 hour ago

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…

2 days ago

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…

2 days ago

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…

3 days ago