ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ.

ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರಿಗೆ ಇಂದು ತಮ್ಮ ನಾಮ ಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮುಖಂಡರಾದ ಮೊಟಮ್ಮ, ಅಂಶುಮತ್ ಉಪಸ್ಥಿತರಿದ್ದರು.



