ಇತರೆ

ಕಡಬದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಮಾಲೋಚನ ಸಭೆ; ಬಂದೂಕು ಠೇವಣಿ ವಿರುದ್ಧ ಕಾನೂನು ಹೋರಾಟಕ್ಕೆ ನಿರ್ಣಯ

ಕಡಬ :ಚುನಾವಣೆ ಸಮಯದಲ್ಲಿ ರೈತರ ಪರವಾನಿಗೆ ಇರುವ ಬಂದೂಕುಗಳನ್ನು ಠಾಣೆಗಳಲ್ಲಿ ಠೇವಣಿ ಇಡಲು ಸರಕಾರ ಆದೇಶ ನೀಡಿರುವುದರ ವಿರುದ್ಧ ಕಾನೂನು ಹೋರಾಟ ನಡೆಸುವ ಸಲುವಾಗಿ ಕೃಷಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರಮುಖರ ನೇತೃತ್ವದಲ್ಲಿ ಕಡಬದ ಒಕ್ಕಲಿಗ ಸಮುದಾಯ ಭವನದಲ್ಲಿ ಸಮಾಲೋಚನ ಸಭೆ ನಡೆಸಲಾಯಿತು.

ಸಭೆಯಲ್ಲಿ ಕಾನೂನು ಮಾಹಿತಿ ನೀಡಿದ ನ್ಯಾಯವಾದಿ ಕೊಲ್ಲಮೊಗ್ರದ ಪ್ರದೀಪ್‌ ಕುಮಾರ್ ಕೆ.ಎಲ್.ಅವರು ಬಂದೂಕುಗಳನ್ನು ಠೇವಣಿ ಇಡಲು ಸರಕಾರ ಆದೇಶಿಸಿರುವುದರ ವಿರುದ್ದ ಕಾನೂನು ಹೋರಾಟ ಅನಿವಾರ್ಯವಾಗಿದೆ. ಈಗಾಗಲೇ ಹಲವಾರು ಮಂದಿ ಕೃಷಿಕರು ವೈಯಕ್ತಿಕವಾಗಿ ಕಾನೂನು ಹೋರಾಟ ನಡೆಸಿ ಬಂದೂಕು ಠೇವಣಿ ಇಡುವುದರಿಂದ ವಿನಾಯಿತಿ ಪಡೆದಿದ್ದಾರೆ. ಬಂದೂಕು ಠೇವಣಿ ಇಡುವಂತೆ ಕೃಷಿಕರನ್ನು ಬಲವಂತಪಡಿಸಬಾರದು ಎಂದು ಈಗಾಗಲೇ ಉಚ್ಚ ನ್ಯಾಯಾಲಯವು ಅಭಿಪ್ರಾಯಪಟ್ಟಿದೆ. ಕೇರಳ ರಾಜ್ಯದಲ್ಲಿ ಬಂದೂಕುಗಳನ್ನು ಠೇವಣಿ ಇಡುವ ನಿಯಮವಿಲ್ಲ, ಅದೇ ರೀತಿ ಕರ್ನಾಟಕದಲ್ಲಿಯೂ ಆದೇಶ ಹೊರಡಿಸುವ ನಿಟ್ಟಿನಲ್ಲಿ ನಾವೆಲ್ಲರೂ ಸೇರಿ ಕಾನೂನು ಹೋರಾಟ ಮಾಡಬೇಕಿದೆ. ಆ ರೀತಿ ಆದೇಶವಾದರೆ ಮಾತ್ರ ಕೃಷಿಕರು ಪ್ರತೀ
ಚುನಾವಣೆಯ ವೇಳೆಯೂ ಎದುರಿಸುವ ತೊಂದರೆಯಿಂದ ಪಾರಾಗಬಹುದು ಎಂದು ಅಭಿಪ್ರಾಯಪಟ್ಟರು.

ಉಚ್ಚನ್ಯಾಯಾಲಯದ
ಮೊರೆ ಹೋಗಲು ನಿರ್ಧಾರ

ಪ್ರಕರಣಕ್ಕೆ ಸಂಬಂಧಿಸಿ ನ್ಯಾಯವಾದಿ ಪ್ರದೀಪ್ ಕುಮಾರ್ ಕೆ.ಎಲ್. ಅವರ ಮೂಲಕ ಬಂದೂಕು ಠೇವಣಿ ಇಡುವುದರಿಂದ ವಿನಾಯಿತಿ ಪಡೆಯಲು ಮತ್ತು ವಿಚಾರಕ್ಕೆ ಶಾಶ್ವತ ಪರಿಹಾರ ಪಡೆಯಲು ಸಭೆಯಲ್ಲಿ ಭಾಗವಹಿಸಿದ 33 ಮಂದಿ ಕೃಷಿಕರು ವೈಯಕ್ತಿಕ ನೆಲೆಯಲ್ಲಿ ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ನಿರ್ಧರಿಸಿ ಅಗತ್ಯ ದಾಖಲೆಗಳನ್ನು ನ್ಯಾಯವಾದಿಗೆ ಹಸ್ತಾಂತರಿಸಿ ವಕಾಲತಿಗೆ ಸಹಿ ಹಾಕಿದರು. ಅರ್ಜಿಯನ್ನು ಎ. 4ರಂದೇ ನ್ಯಾಯಾಲಯದಲ್ಲಿ ವಿಚಾರಣೆಗೆ ಬರುವ

ರೀತಿಯಲ್ಲಿ ಪ್ರಯತ್ನಿಸುವುದಾಗಿ ನ್ಯಾಯವಾದಿ ಭರವಸೆ ನೀಡಿದರು.

ರೈತ ಮುಖಂಡ ವಿಕ್ಟರ್ ಮಾರ್ಟಿಸ್ ಹೊಸಮಠ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಿವಣ್ಣ ಗೌಡ ಇಡ್ಯಾಡಿ, ಜಿಲ್ಲಾ ಪರಿಷತ್ ಮಾಜಿ ಸದಸ್ಯ ಸಯ್ಯದ್ ಮೀರಾ ಸಾಹೇಬ್, ಕುಂತೂರು ಪದವು ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಜೇಮ್ಸ್ ಥಾಮಸ್ ವಿ.ಎಂ., ಸವಣೂರಿನ ನಾಟಿ ವೈದ್ಯ ವಾಸುದೇವ ಇಡ್ಯಾಡಿ, ಪ್ರಮುಖರಾದ ವರ್ಗೀಸ್ ತೊಮಸ್ ಎಂಜಿರ, ಸಂತೋಷ್ ಉಳಿಪು, ಚಂದ್ರಶೇಖರ ಗೌಡ ಕೋಡಿಬೈಲು, ಬಾಲಕೃಷ್ಣ ಭಟ್ ಮೂಜೂರುಕಟ್ಟ ಶಿವಪ್ರಕಾಶ್ ನೆಲ್ಯಾಡಿ, ರಜಾಕ್ ಅಡ್ಡಗದ್ದೆ, ಉಮ್ಮರ್ ಮುಳಾರ್, ಕರುಣಾಕರ ಗೌಡ ಮತ್ತಿತರರು ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…

17 mins ago

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…

21 mins ago

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…

2 days ago

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…

2 days ago

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…

3 days ago