ಉಡುಪಿಯಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್. ಪಾಟೀಲ್ ನಡಹಳ್ಳಿ ಹೇಳಿಕೆ
ಉಡುಪಿ: ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಜಾರಿಯಾಗಿದ್ದ ರೈತಪರ ಯೋಜನೆಗಳನ್ನು ಕಾಂಗ್ರೆಸ್ ನೇತೃತ್ವದ ಸರ್ಕಾರ ರದ್ದುಗೊಳಿಸುವ ಮೂಲಕ ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್. ಪಾಟೀಲ್ ನಡಹಳ್ಳಿ ಆರೋಪಿಸಿದರು.
ಉಡುಪಿಯ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಹಾಲಿನ ಪ್ರೋತ್ಸಾಹ ಧನವನ್ನು ₹7ಕ್ಕೆ ಹೆಚ್ಚಿಸುವುದಾಗಿ ಹೇಳಿತ್ತು. ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿ ಸರ್ಕಾರದ ಅವಧಿಯಲ್ಲಿದ್ದ ₹5 ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡದೆ ತಡೆ ಹಿಡಿಯಿತು. ₹717 ಕೋಟಿ ಹಾಲಿನ. ಪ್ರೋತ್ಸಾಹಧನ ಬಾಕಿ ಇದೆ ಎಂದರು.
ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ ರೈತರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಜಾರಿಗೆ ತರಲಾಗಿತ್ತು. ಪ್ರಸ್ತುತ ಯೋಜನೆಯನ್ನು ಕೈಬಿಡಲಾಗಿದೆ. ರೈತರಿಗೆ ಡೀಸೆಲ್ ಸಬ್ಸಿಡಿ ಯೋಜನೆಯೂ ರದ್ದಾಗಿದೆ ಎಂದು ದೂರಿದರು. ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳಲ್ಲೂ ಸೋಲು ನಿಶ್ಚಿತ ಎಂಬ ಸತ್ಯ ಕಾಂಗ್ರೆಸ್‌ಗೆ ಅರಿವಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು, ಚಾಮರಾಜ ನಗರ ಕ್ಷೇತ್ರ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…