ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ಪಕ್ಷದ ಕಾರ್ಯಕರ್ತರು, ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಿದರು.
ಬಂಟ್ಸ್ ಹಾಸ್ಟೆಲ್ ಸರ್ಕಲ್ ನಲ್ಲಿರುವ ಬಿಜೆಪಿ ಚುನಾವಣಾ ಕಾರ್ಯಾಲಯದಿಂದ ಚೆಂಡೆ, ಬ್ಯಾಂಡ್ ವಾದ್ಯದೊಂದಿಗೆ ಹೊರಟ ಮೆರವಣಿಗೆಯು ಅಂಬೇಡ್ಕರ್ ವೃತ್ತ, ಹಂಪನಕಟ್ಟೆ ಮಾರ್ಗವಾಗಿ ಪುರಭವನದ ಬಳಿ ಸಮಾಪ್ತಿಗೊಂಡಿತು. ಮೆರವಣಿಗೆ ಹೊರಡುವ ಪೂರ್ವದಲ್ಲಿ ವಂದೇ ಮಾತರಂ ಗೀತೆ ಹಾಡಲಾಯಿತು.ಭಾರತ ಮಾತೆಯ ಚಿತ್ರ ಇರುವ ವಾಹನದ ಜೊತೆಗೆ ಕಾರ್ಯಕರ್ತರು ಹೆಜ್ಜೆ ಹಾಕಿದರು.ಬಂಟ್ಸ್ ಹಾಸ್ಟೆಲ್ ಪಕ್ಕದ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಕಚೇರಿಯಿಂದ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು.ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಅವರು ನಾಮಪತ್ರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕಿ ಭಾಗೀರಥಿ ಮುರುಳ್ಯ ,ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೇ ಮಾಧವ ಗೌಡ ಮತ್ತಿತರರು ಉಪಸ್ಥಿತರಿದ್ದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…