ಉಡುಪಿ: ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿರುವ ಬೆಂಗಳೂರಿನ ಡಾ. ಎಂ.ಎಸ್. ರಾಮಯ್ಯ ಸಮೂಹ ಸಂಸ್ಥೆಗಳ ವತಿಯಿಂದ ಅಯೋಧ್ಯೆ ರಾಮಮಂದಿರಕ್ಕೆ ಪೇಜಾವರ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಮೂಲಕ ಸುಸಜ್ಜಿತ ಆ್ಯಂಬುಲೆನ್ಸ್ ಅನ್ನು ಶುಕ್ರವಾರ ಅಯೋಧ್ಯೆಯಲ್ಲಿ ಹಸ್ತಾಂತರಿಸಲಾಯಿತು.
ರಾಮಮಂದಿರಕ್ಕೆ ಪ್ರತಿನಿತ್ಯ ಬರುತ್ತಿರುವ ಲಕ್ಷಾಂತರ ಭಕ್ತರ ತುರ್ತು ಆರೋಗ್ಯ ಸೇವೆಗಾಗಿ ಆ್ಯಂಬುಲೆನ್ಸ್ ಅನ್ನು ಒದಗಿಸುವ ಇಂಗಿತವನ್ನು ಸಂಸ್ಥೆಯ ಪ್ರಮುಖರಾದ ಪಟ್ಟಾಭಿರಾಮ್ ಅವರು ಶ್ರೀಗಳರಲ್ಲಿ ವ್ಯಕ್ತಪಡಿಸಿದ್ದರು. ಅದರಂತೆ ಸುಮಾರು 38 ಲಕ್ಷ ರೂ ವೆಚ್ಚದ ಸುಸಜ್ಜಿತವಾದ ನೂತನ ಆ್ಯಂಬುಲೆನ್ಸ್ ಅ ನ್ನು ಅಯೋಧ್ಯೆಯಲ್ಲಿ ಶ್ರೀ ಪಟ್ಟಾಭಿರಾಮ್ ಮತ್ತು ಅನಿತಾ ಪಟ್ಟಾಭಿರಾಮ್ ಅವರು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಗೆ ಹಸ್ತಾಂತರಿಸಿದರು.
ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ , ಕೋಶಾಧಿಕಾರಿ ಸ್ವಾಮಿ ಗೋವಿಂದಗಿರಿ ಮಹಾರಾಜ್, ಅನಿಲ್ ಮಿಶ್ರಾ , ವಿಹಿಂಪ ರಾಷ್ಟ್ರೀಯ ಮುಖಂಡ ಗೋಪಾಲ್ ಜಿ, ಪೇಜಾವರ ಮಠದ ಅಧಿಕಾರಿಗಳಾದ ಶ್ರೀವತ್ಸ ತಂತ್ರಿ , ಶ್ರೀಗಳ ಆಪ್ತರಾದ ಶ್ರೀನಿವಾಸ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…