ಜನ ಮನದ ನಾಡಿ ಮಿಡಿತ

Advertisement

ದ.ಕ. ಲೋಕಸಭಾ ಚುನಾವಣೆ: ಸೌಜನ್ಯಾ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದ.ಕ. ಜಿಲ್ಲೆಯ ಸೌಜನ್ಯಾ ಪರ ಹೋರಾಟ ಸಮಿತಿ ನೋಟ ಅಭಿಯಾನ ಹಮ್ಮಿಕೊಂಡಿದ್ದು, ಹೋರಾಟ ಗಾರರು ಈ ಬಾರಿ ನೋಟ ಮತ ಚಲಾಯಿಸುವ ಮೂಲಕ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಲು ಮುಂದಾಗಿದ್ದಾರೆ ಎಂದು ಸಮಿತಿಯ ಮುಖಂಡ ಗಿರೀಶ್ ಮಟ್ಟಣ್ಣನವರ್ ತಿಳಿಸಿದ್ದಾರೆ.

ಶುಕ್ರವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣ ನಡೆದು 11 ವರ್ಷ ಕಳೆದರೂ ಯಾವುದೇ ರಾಜಕೀಯ ಪಕ್ಷಗಳು ಸ್ಪಂದನೆ‌ ನೀಡಿಲ್ಲ. ಆದ್ದರಿಂದ ಈ ಬಾರಿ ನೋಟಕ್ಕೆ ಮತಚಲಾಯಿಸಿ ಗಮನ ಸೆಳೆಯಲು ಉದ್ದೇಶಿಸಲಾಗಿದೆ. ದ‌.ಕ. ಹಾಗೂ ಉಡುಪಿಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರವಾರು ಅಭಿಯಾನ ಹಮ್ಮಿಕೊಳ್ಳುತ್ತಿದ್ದು, ಸುಳ್ಯದಲ್ಲಿ ಎ. 24ರಂದು ನೋಟ ಜನಜಾಗೃತಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದರು.

ನೋಟ ಬಗ್ಗೆ ಜನ ಜಾಗೃತಿ ಅಗತ್ಯವಿದೆ ಎಂದು ನ್ಯಾಯಾಲಯವೇ ಹೇಳಿದೆ. ಚುನಾವಣಾ ಆಯೋಗವೂ ನಮ್ಮ ಈ ಅಭಿಯಾನಕ್ಕೆ ಸಹಕಾರ ನೀಡುವ ಜೊತೆ ಹೆಣ್ಣು ಮಕ್ಕಳ ಬಗ್ಗೆ ಪ್ರಾಧಾನ್ಯತೆ ನೀಡುವ ಈ ಅಭಿಯಾನಕ್ಕೆ ಜನರು ಸಹಕಾರ ನೀಡಬೇಕು ಎಂದರು.

ಚುನಾವಣೆ ಹಿನ್ನೆಲೆಯಲ್ಲಿ 50 ಸಾವಿರಕ್ಕಿಂತ ಹೆಚ್ಚಿನ ಹಣ ಸಾಗಿಸಲು ನಿರ್ಬಂಧ ಇದೆ. ಆದರೆ ಸಂಘದ ಹೆಸರಿನಲ್ಲಿ ಬಡ್ಡಿ ದಂಧೆಯಲ್ಲಿ ಸಂಗ್ರಹಿಸಿದ ಅಕ್ರಮ ಲಕ್ಷಗಟ್ಟಲೆ ಹಣ ಶುಕ್ರವಾರ, ಶನಿವಾರ ನಿರ್ಭೀತಿಯಿಂದ ಸಾಗಿಸಲಾಗುತ್ತಿದೆ ಎಂದು ಆರೋಪಿಸಿದ ಗಿರೀಶ್ ಮಟ್ಟಣ್ಣನವರ್, ಚುನಾವಣಾ ಆಯೋಗ ಈ ಬಗ್ಗೆ ಗಮನಹರಿಸಬೇಕು ಎಂದು ಆಗ್ರಹಿಸಿದರು. ದ.ಕ. ಹಾಗೂ ಉಡುಪಿಯ ಕರಾವಳಿ ಭಾಗದಲ್ಲಿ ಈ ಅಭಿಯಾನ ಹಮ್ಮಿಕೊಳ್ಳುತ್ತಿದ್ದು, ಸುಳ್ಯದಲ್ಲಿ ಎ.24ರಂದು ನೋಟ ಜನಜಾಗೃತಿ ಸಭೆ ನಡೆಸುತ್ತಿರುವುದಾಗಿ ಪ್ರಸನ್ನ ರವಿ ತಿಳಿಸಿದರು. ಈ ಸುದ್ದಿಗೋಷ್ಠಿಯಲ್ಲಿ ತಮ್ಮಣ್ಣ ಶೆಟ್ಟಿ, ಜಯನ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಾಧ್ಯಮ ಮಿತ್ರ ನಾಗರಾಜ್ ಅನಾರೋಗ್ಯದಿಂದ ನಿಧನ

ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದ ಸ್ಕೂಟರ್ ಸವಾರನ ಬಂಧನ

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

ಬಂಟ್ವಾಳ: ಮಂಚಿಯ ವ್ಯಕ್ತಿ ಮಕ್ಕಾದಲ್ಲಿ ಹೃದಯಾಘಾತದಿಂದ ಮೃ*ತ್ಯು….!

error: Content is protected !!