ತುಳುನಾಡ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ನಮನ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಮಂಗಳೂರು: ಇಲ್ಲಿನ ಬಾವುಟಗುಡ್ಡೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಅವರ ಪ್ರತಿಮೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಪುಷ್ಪಾರ್ಚನೆ ಮಾಡಿದರು.
ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮೊದಲೇ ತುಳುನಾಡಿನಲ್ಲಿ ಸ್ವಾತಂತ್ರ್ಯ ಹೋರಾಟ ನಡೆದಿತ್ತು. ಇದನ್ನು ಅಮರ ಸುಳ್ಯದ ದಂಗೆ ಎಂದು ಕರೆದರೆ, ಇನ್ನೂ ಕೆಲವರು ತುಳುನಾಡ ಸ್ವಾತಂತ್ರ್ಯ ಸಂಗ್ರಾಮ ಎಂದೂ ಕರೆದದ್ದಿದೆ. ಈ ಹೋರಾಟದಲ್ಲಿ ಕೆದಂಬಾಡಿ ರಾಮಯ್ಯ ಗೌಡ ಅವರು ಪ್ರಮುಖ ಪಾತ್ರ ವಹಿಸಿದ್ದರು.
ಈ ಹೋರಾಟದಲ್ಲಿ ಬ್ರಿಟಿಷರನ್ನು ಪರಾಭವಗೊಳಿಸಿದ ತುಳುನಾಡ ಹೋರಾಟಗಾರರು ಮುಂದಿನ 13 ದಿನಗಳ ಕಾಲ ಸ್ವತಂತ್ರ ತುಳುನಾಡನ್ನು ಆಳ್ವಿಕೆ ಮಾಡಿದ್ದರು. ಹೀಗೆ ಆಳ್ವಿಕೆ ಶುರು ಮಾಡಿದ ದಿನ ಏಪ್ರಿಲ್ 5.
ಈ ಹಿನ್ನೆಲೆಯಲ್ಲಿ ಈ ನಾಡಿನ ಸ್ವಾತಂತ್ರ್ಯಕ್ಕಾಗಿ ತನ್ನ ಪ್ರಾಣಾರ್ಪಣೆಗೈದ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಅವರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ತುಳುನಾಡ ಸಂಗ್ರಾಮದಲ್ಲಿ ಪಾಲ್ಗೊಂಡ ವೀರರಿಗೆ ಗೌರವ ಸಲ್ಲಿಸಲಾಯಿತು.
ಮಾಧ್ಯಮ ಲೋಕದಲ್ಲಿ ಅಚ್ಚಳಿಯದ ಸಾಧನೆಯನ್ನು ಮಾಡಿ 2025 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಮಾಧ್ಯಮ ಆಡಳಿತ…
ಮಾಧ್ಯಮ ಲೋಕದಲ್ಲಿ ಸುದೀರ್ಘ ದುಡಿಮೆ ಮತ್ತು ತನ್ನ ಕಲಾತ್ಮಕ ಕ್ಯಾಮರಾ ಕೌಶಲ್ಯದಿಂದ ಜನಮನ ಸೆಳೆದಿದ್ದ ನಾಗರಾಜ್ ಇಂದು ನಿಧನರಾಗಿದ್ದಾರೆ. ಆರ್ಥಿಕ…
ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದೆ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಸ್ಕೂಟರ್ ಸವಾರನೋರ್ವನನ್ನು ಪೋಲೀಸರು ಬಂಧಿಸಿದ್ದಾರೆ. ಪುತ್ತೂರು ಬೆಟ್ಟಂಪಾಡಿ ನಿವಾಸಿ…
ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಝಕರಿಯಾ ಜೋಕಟ್ಟೆ ಅವರಿಗೆ ಹೊರನಾಡ ಕನ್ನಡಿಗ ವಿಭಾಗದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ…
ಪಾಣೆಮಂಗಳೂರು ಹಳೆ ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆಯಾಗಿದೆ. ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಇಲೆಕ್ಟಿಕ್ ಆಟೋ…
ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹಲವಾರು ಮಂದಿಯಿಂದ ಕೋಟ್ಯಾಂತರ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ದಂಪತಿಯನ್ನು ಕಾವೂರು…