ಜನ ಮನದ ನಾಡಿ ಮಿಡಿತ

Advertisement

ಅಟೋ ಪಲ್ಟಿ ಚಾಲಕ ಗಂಭೀರ

ಕಡಬ :ನಾಯಿ ಅಡ್ಡ ಬಂದು ಚಾಲಕನ ನಿಯಂತ್ರಣ ತಪ್ಪಿ ಅಟೋ ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಆಲಂಕಾರು ಸಮೀಪದ ಸುರುಳಿ ಎಂಬಲ್ಲಿ ನಡೆದಿದೆ.


ಗಾಯಗೊಂಡವರನ್ನು ಸ್ಥಳೀಯ ವ್ಯಕ್ತಿ ಸುಬ್ರಹ್ಮಣ್ಯ ನಾಯ್ಕ ಎಂದು ಗುರುತಿಸಲಾಗಿದೆ. ಇವರು ತಮ್ಮ ಅಟೋದಲ್ಲಿ ಸುರುಳಿ ಕಡೆಯಿಂದ ಆಲಂಕಾರಿಗೆ ಬರುವಾಗ ಸುರುಳಿ ಸೇತುವೆಯ ಬಳಿ ಇಕ್ಕಟ್ಟಾದ ಸ್ಥಳದಲ್ಲಿ ನಾಯಿ ಅಡ್ಡ ಬಂದು ಅಟೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಅಟೋ ನಜ್ಜುಗುಜ್ಜಾಗಿದೆ. ಚಾಲಕನ‌ ಕಾಲು ಮುರಿತಕ್ಕೆ ಒಳಗಾಗಿದ್ದು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುವನ್ನು‌ ತಕ್ಷಣ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ‌ ಚಿಕಿತ್ಸೆಗಾಗಿ ಮಂಗಳೂರಿಗೆ ಕಳುಹಿಸಲಾಗಿದೆ. ಅಟೋದಲ್ಲಿ ಚಾಲಕ ಮಾತ್ರ ಇದ್ದು, ಪ್ರಯಾಣಿ ಕರು ಇಲ್ಲದೆ ಇರುವುದರಿಂದ ಸಂಭಾವ್ಯ ಅಪಾಯ ತಪ್ಪಿದೆ. ಘಟನೆ ನಡೆದ ಸ್ಥಳ ಅಪಾಯಕಾರಿಯಾಗಿದ್ದು, ಇಕ್ಕಟ್ಟಾದ ಪರಿಣಾಮ ಇಲ್ಲಿ ಹತ್ತು ಹಲವು ಅಫಘಾತ ನಡೆದಿದೆ. ಇಲ್ಲಿ ರಸ್ತೆ ಅಗಲೀಕರಣ ಆಗಬೇಕೆಂದು ಸ್ಥಳೀಯರು ಅಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!