ಕಡಬ :ನಾಯಿ ಅಡ್ಡ ಬಂದು ಚಾಲಕನ ನಿಯಂತ್ರಣ ತಪ್ಪಿ ಅಟೋ ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಆಲಂಕಾರು ಸಮೀಪದ ಸುರುಳಿ ಎಂಬಲ್ಲಿ ನಡೆದಿದೆ.
ಗಾಯಗೊಂಡವರನ್ನು ಸ್ಥಳೀಯ ವ್ಯಕ್ತಿ ಸುಬ್ರಹ್ಮಣ್ಯ ನಾಯ್ಕ ಎಂದು ಗುರುತಿಸಲಾಗಿದೆ. ಇವರು ತಮ್ಮ ಅಟೋದಲ್ಲಿ ಸುರುಳಿ ಕಡೆಯಿಂದ ಆಲಂಕಾರಿಗೆ ಬರುವಾಗ ಸುರುಳಿ ಸೇತುವೆಯ ಬಳಿ ಇಕ್ಕಟ್ಟಾದ ಸ್ಥಳದಲ್ಲಿ ನಾಯಿ ಅಡ್ಡ ಬಂದು ಅಟೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಅಟೋ ನಜ್ಜುಗುಜ್ಜಾಗಿದೆ. ಚಾಲಕನ ಕಾಲು ಮುರಿತಕ್ಕೆ ಒಳಗಾಗಿದ್ದು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುವನ್ನು ತಕ್ಷಣ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕಳುಹಿಸಲಾಗಿದೆ. ಅಟೋದಲ್ಲಿ ಚಾಲಕ ಮಾತ್ರ ಇದ್ದು, ಪ್ರಯಾಣಿ ಕರು ಇಲ್ಲದೆ ಇರುವುದರಿಂದ ಸಂಭಾವ್ಯ ಅಪಾಯ ತಪ್ಪಿದೆ. ಘಟನೆ ನಡೆದ ಸ್ಥಳ ಅಪಾಯಕಾರಿಯಾಗಿದ್ದು, ಇಕ್ಕಟ್ಟಾದ ಪರಿಣಾಮ ಇಲ್ಲಿ ಹತ್ತು ಹಲವು ಅಫಘಾತ ನಡೆದಿದೆ. ಇಲ್ಲಿ ರಸ್ತೆ ಅಗಲೀಕರಣ ಆಗಬೇಕೆಂದು ಸ್ಥಳೀಯರು ಅಗ್ರಹಿಸಿದ್ದಾರೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…