ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು.
ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ ಜವಬ್ದಾರಿಯನ್ನು ಗುತ್ತಿಗೆದಾರರಿಗೆ ಈ ಸಂದರ್ಭದಲ್ಲಿ ನೆನಪಿಸಿದರು.ನೆರೆ ನೀರು ನಿಲ್ಲುವ ಗುಂಡಿಯಾದ ಸ್ಥಳದಲ್ಲಿ ಪೋಲೀಸ್ ಠಾಣೆಯ ನಿರ್ಮಾಣವಾಗಿದ್ದರಿಂದ ಆಧುನಿಕ ತಂತ್ರಜ್ಞಾನದ ಹೆಚ್ಚವರಿ ರಿಟೈಂನಿಂಗ್ ವಾಲ್ ನಿರ್ಮಾಣದ ವಿಚಾರವನ್ನು ಗುತ್ತಿಗೆದಾರರ ಗಮನಕ್ಕೆ ತಂದಿದ್ದು, ಈ ನಿಟ್ಟಿನಲ್ಲಿ ಕೆಲವೊಂದು ಸಲಹೆ,ಸೂಚನೆಗಳನ್ನು ನೀಡಿದರು. ಕಟ್ಟಡದ ನಿರ್ಮಾಣದ ವೇಳೆ ಉತ್ತಮ ಗುಣಮಟ್ಟದ ಮೂಲಭೂತವಾದ ವಸ್ತುಗಳನ್ನು ಬಳಸಿ ಎಂದು ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು
ಈ ಸಂದರ್ಭದಲ್ಲಿ ಅಡಿಸನಲ್ ಎಸ್.ಪಿ.ಜಗದೀಶ್, ಬಂಟ್ವಾಳ ಡಿವೈ.ಎಸ್.ಪಿ.ವಿಜಯಪ್ರಸಾದ್, ಬಂಟ್ವಾಳ ನಗರ ಪೋಲೀಸ್ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ, ಟ್ರಾಫಿಕ್ ಎಸ್.ಐ.ಸುತೇಶ್, ಪಿಎಚ್.ಸಿ.ಕ್ವಾಲಿಟಿ & ಕಂಟ್ರೋಲ್ ಇಂಜಿನಿಯರ್ ಶಿವಪ್ರಸಾದ್,ಎಕ್ಸ್ ಕ್ಯೂಟಿವ್ ಇಂಜಿನಿಯರ್ ಸಣ್ಣೇಗೌಡ, ಎ.ಇ.ಇ.ರಾಜೇಶ್, ಮತ್ತಿತರರು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…