ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ…. ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ ಹಿಡಿಯುತ್ತದೆ. ಇನ್ಮುಂದೆ ಸಾರಿಗೆ ನಿಯಮಗಳನ್ನು ಮೀರಿ ಚಾಲನೆ ಮಾಡಿ ಸಿಕ್ಕಿಬಿದ್ದರೆ, ಏನಿದ್ದರೂ ದಂಡ ನೀಡಿ ತೆಪ್ಪಗೆ ಬರುವುದು ಸರಿ…
ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣೆಯ ದಂಡ ವಸೂಲಿ ಮಾಡುವ ಅಧಿಕಾರಿಗಳಿಗೆ ಎಂಬಂತೆ ನಾಲ್ಕು ಶರೀರದ ಮೇಲೆ ಅಳವಡಿಸುವ (Body Worn Camara) ಕ್ಯಾಮರಾ ಇಲಾಖೆ ನೀಡಿದ್ದು, ಇದೀಗ ಪೋಲೀಸರ ಮೇಲೆ ಕಣ್ಗಾವಲು ವ್ಯವಸ್ಥೆ ಕಲ್ಪಿಸಲಾಗಿದೆ.
ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಅನಾವಶ್ಯಕವಾದ ವಾದವಿವಾದಗಳನ್ನು ತಡೆದು ನ್ಯಾಯಪರವಾಗಿ ಕಾರ್ಯನಿರ್ವಹಿಸಲು ಇಲಾಖೆ ಒಂದು ಉತ್ತಮ ವ್ಯವಸ್ಥೆ ಮಾಡಿದೆ.
ರಸ್ತೆಯಲ್ಲಿ ನಡೆಯುವ ಅನೇಕ ವಿಚಾರಗಳಿಗೆ ಈ ಕ್ಯಾಮರಾ ಉಪಯೋಗವಾಗಲಿದ್ದು,ಕನಿಷ್ಠ 24 ಗಂಟೆಯವರೆಗೆ ಇದು ಕಾರ್ಯಚರಿಸುತ್ತದೆ.
ಉತ್ತಮ ಗುಣಮಟ್ಟದ ಕ್ಯಾಮರಾ ಇದಾಗಿದೆ .
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…