ಜನ ಮನದ ನಾಡಿ ಮಿಡಿತ

Advertisement

ತಾತ್ಕಾಲಿಕವಾಗಿ ನಿಲ್ಲಿಸಿದ್ದ, ಸೈನ್ ಬೋರ್ಡ್ಗಳ ಕಳ್ಳತನ

ನೆಲ್ಯಾಡಿ:ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿ ತಾತ್ಕಾಲಿಕವಾಗಿ ನಿಲ್ಲಿಸಿದ್ದ ಸೈನ್ ಬೋರ್ಡ್‌ಗಳನ್ನು ಕಳ್ಳತನ ಮಾಡಿ ಪಿಕಪ್ ವಾಹನವೊಂದಕ್ಕೆ ತುಂಬಿಸಿ ಸಾಗಾಟ ಮಾಡಲು ಮುಂದಾಗಿದ್ದ ಮೂವರು ಆರೋಪಿಗಳನ್ನು ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಸಂಸ್ಥೆಯ ಸಿಬ್ಬಂದಿಯೇ ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ನಡೆದಿದೆ.

ಆಲೂರು ಹೊಸಹಳ್ಳಿಯ ಪುಟ್ಟಸ್ವಾಮಿ ಎಂಬವರ ಪುತ್ರ ಜ್ಯೋತಿಷ್(25ವ.), ನಿಂಗರಾಜು ಎಂಬವರ ಪುತ್ರ ಮೋಹನ್‌ಕುಮಾರ್(23ವ.)ಹಾಗೂ ಆಲೂರು ತೊರಗರವಳ್ಳಿ ನಿವಾಸಿ ಪಾಪಯ್ಯ ಎಂಬವರ ಪುತ್ರ ಗಣೇಶ (23ವ.) ಕಳವಿಗೆ ಯತ್ನಿಸಿದ ಆರೋಪಿಗಳಾಗಿದ್ದಾರೆ. ಇವರು ಎ.4ರಂದು ರಾತ್ರಿ 8 ಗಂಟೆಗೆ ಅಡ್ಡಹೊಳೆಯಲ್ಲಿ ರಸ್ತೆ ಬದಿಯಲ್ಲಿ ತಾತ್ಕಾಲಿಕವಾಗಿ ನಿಲ್ಲಿಸಿದ್ದ 3 ಸೈನ್ ಬೋರ್ಡ್‌ಗಳನ್ನು ಕಳವುಗೈದು ಮಹೀಂದ್ರ ಪಿಕ್‌ಅಪ್ (ಕೆಎ02 ಎಸಿ 9426)ವಾಹನಕ್ಕೆ ಲೋಡ್ ಮಾಡುತ್ತಿದ್ದ ವೇಳೆ ರೌಂಡ್ಸ್‌ನಲ್ಲಿದ್ದ ಪೆರಿಯಶಾಂತಿ-ಅಡ್ಡಹೊಳೆ ನಡುವಿನ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಿರ್ವಹಿಸುತ್ತಿರುವ ಎಸ್.ಎಂ ಔತಾಡ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯಲ್ಲಿ ಅಡ್ಮಿನ್ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ನಿವಾಸಿ ಸಂಗಮ್‌ನಾಥ್ ಹಾಗೂ ಸಿಬ್ಬಂದಿ ಸಂಚಿತ್ ಪವಾರ್ ಅವರಿಗೆ ಸಿಕ್ಕಿಬಿದ್ದಿದ್ದಾರೆ. ಬಳಿಕ ಮೂವರು ಆರೋಪಿಗಳನ್ನು ಅವರ ವಾಹನ ಹಾಗೂ ಕಳವು ಮಾಡಿದ 3 ಸೈನ್ ಬೋರ್ಡ್‌ಗಳನ್ನು ಔತಾಡ್ ಸಂಸ್ಥೆಯ ಸಿಬ್ಬಂದಿಗಳು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದಾರೆ. ಕಳವಿಗೆ ಯತ್ನಿಸಿದ್ದ 3 ಸೈನ್ ಬೋರ್ಡ್‌ಗಳ ಮೌಲ್ಯ 9ಸಾವಿರ ರೂ. ಎಂದು ಅಂದಾಜಿಸಲಾಗಿದೆ.

ಉಪ್ಪಿನಂಗಡಿ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!