ನೆಲ್ಯಾಡಿ:ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿ ತಾತ್ಕಾಲಿಕವಾಗಿ ನಿಲ್ಲಿಸಿದ್ದ ಸೈನ್ ಬೋರ್ಡ್‌ಗಳನ್ನು ಕಳ್ಳತನ ಮಾಡಿ ಪಿಕಪ್ ವಾಹನವೊಂದಕ್ಕೆ ತುಂಬಿಸಿ ಸಾಗಾಟ ಮಾಡಲು ಮುಂದಾಗಿದ್ದ ಮೂವರು ಆರೋಪಿಗಳನ್ನು ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಸಂಸ್ಥೆಯ ಸಿಬ್ಬಂದಿಯೇ ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ನಡೆದಿದೆ.
ಆಲೂರು ಹೊಸಹಳ್ಳಿಯ ಪುಟ್ಟಸ್ವಾಮಿ ಎಂಬವರ ಪುತ್ರ ಜ್ಯೋತಿಷ್(25ವ.), ನಿಂಗರಾಜು ಎಂಬವರ ಪುತ್ರ ಮೋಹನ್‌ಕುಮಾರ್(23ವ.)ಹಾಗೂ ಆಲೂರು ತೊರಗರವಳ್ಳಿ ನಿವಾಸಿ ಪಾಪಯ್ಯ ಎಂಬವರ ಪುತ್ರ ಗಣೇಶ (23ವ.) ಕಳವಿಗೆ ಯತ್ನಿಸಿದ ಆರೋಪಿಗಳಾಗಿದ್ದಾರೆ. ಇವರು ಎ.4ರಂದು ರಾತ್ರಿ 8 ಗಂಟೆಗೆ ಅಡ್ಡಹೊಳೆಯಲ್ಲಿ ರಸ್ತೆ ಬದಿಯಲ್ಲಿ ತಾತ್ಕಾಲಿಕವಾಗಿ ನಿಲ್ಲಿಸಿದ್ದ 3 ಸೈನ್ ಬೋರ್ಡ್‌ಗಳನ್ನು ಕಳವುಗೈದು ಮಹೀಂದ್ರ ಪಿಕ್‌ಅಪ್ (ಕೆಎ02 ಎಸಿ 9426)ವಾಹನಕ್ಕೆ ಲೋಡ್ ಮಾಡುತ್ತಿದ್ದ ವೇಳೆ ರೌಂಡ್ಸ್‌ನಲ್ಲಿದ್ದ ಪೆರಿಯಶಾಂತಿ-ಅಡ್ಡಹೊಳೆ ನಡುವಿನ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಿರ್ವಹಿಸುತ್ತಿರುವ ಎಸ್.ಎಂ ಔತಾಡ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯಲ್ಲಿ ಅಡ್ಮಿನ್ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ನಿವಾಸಿ ಸಂಗಮ್‌ನಾಥ್ ಹಾಗೂ ಸಿಬ್ಬಂದಿ ಸಂಚಿತ್ ಪವಾರ್ ಅವರಿಗೆ ಸಿಕ್ಕಿಬಿದ್ದಿದ್ದಾರೆ. ಬಳಿಕ ಮೂವರು ಆರೋಪಿಗಳನ್ನು ಅವರ ವಾಹನ ಹಾಗೂ ಕಳವು ಮಾಡಿದ 3 ಸೈನ್ ಬೋರ್ಡ್‌ಗಳನ್ನು ಔತಾಡ್ ಸಂಸ್ಥೆಯ ಸಿಬ್ಬಂದಿಗಳು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದಾರೆ. ಕಳವಿಗೆ ಯತ್ನಿಸಿದ್ದ 3 ಸೈನ್ ಬೋರ್ಡ್‌ಗಳ ಮೌಲ್ಯ 9ಸಾವಿರ ರೂ. ಎಂದು ಅಂದಾಜಿಸಲಾಗಿದೆ.
ಉಪ್ಪಿನಂಗಡಿ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…