ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ.
ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ.
ಮನೆಯಿಂದ ಬಿಸಿರೋಡು ಕಡೆಗೆ ಸ್ಕೂಟರ್ ನಲ್ಲಿ ಸಹಸವಾರನಾಗಿ ಸಂಚಾರ ಮಾಡುತ್ತಿದ್ದ ವೇಳೆ ನರಿಕೊಂಬು ದಿಂಡಿಗೆ ಎಂಬಲ್ಲಿ ರಿಕ್ಷಾ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಸ್ಥಳದಲ್ಲಿಯೇ ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಘಟನೆಯಿಂದ ರಿಕ್ಷಾ ಚಾಲಕ ಸಜೀಪ ನಿವಾಸಿಗಳು ಜಾಬೀರ್ ಕೂಡ ಗಾಯಗೊಂಡಿದ್ದು, ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪವನ್ ಬಿ.ಮೂಡ ಕಾಲೇಜಿನ ಪ್ರಥಮ ಪಿಯುಸಿ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ಅತ್ಯಂತ ಪ್ರತಿಭಾವಂತ ವಿದ್ಯಾರ್ಥಿಯಾಗಿ ಗುರುತಿಸಿಕೊಂಡಿದ್ದ. ರಜಾ ದಿನಗಳಲ್ಲಿ ಅಜ್ಜನ ಹೊಟೇಲ್ ನಲ್ಲಿ ಕೆಲಸ ಮಾಡುತ್ತಿದ್ದ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಸುತೇಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…