ಉಡುಪಿ
ಮಿನಿ ಬಸೊಂದು ಸ್ಕೂಟರಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಕೇಬಲ್ ಆಪರೇಟರ್ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಕುಂದಾಪುರದ ತಲ್ಲೂರಿನಲ್ಲಿ ನಡೆದಿದೆ.
ತಲ್ಲೂರು ಗರಡಿ ಸಮೀಪದ ನಿವಾಸಿ ಶೇಖರ್ ಪೂಜಾರಿ ಮೃತ ದುರ್ದೈವಿ. ಕಳೆದ ಭಾನುವಾರ ಮಧ್ಯಾಹ್ನ ತಲ್ಲೂರು ಸರ್ಕಲ್ ಬಳಿ ಶೇಖರ್ ಪೂಜಾರಿ ಅವರ ಸ್ಕೂಟರಿಗೆ ಮಿನಿ ಬಸ್ಸೊಂದು ಢಿಕ್ಕಿ ಹೊಡೆದಿತ್ತು ಪರಿಣಾಮ ಶೇಖರ್ ಪೂಜಾರಿ ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…