ಉಡುಪಿ: ಒಬ್ಬ ಸಮರ್ಥ ನಾಯಕ ಯಾವುದೇ ಪಕ್ಷದಲ್ಲಿ ಇರಲಿ ಅವರಿಗೆ ಪ್ರಜ್ಞಾವಂತ ಸಮುದಾಯ ಬೆಂಬಲ ನೀಡುತ್ತದೆ ಎಂಬುದಕ್ಕೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಉತ್ತಮ ನಿದರ್ಶನ.
ಭಾನುವಾರ ಮೂಡಿಗೆರೆಯ ಕಾಂಗ್ರೆಸ್ ಭವನದಲ್ಲಿ ನಡೆದ ಚುನಾವಣಾ ಪ್ರಚಾರದ ಸಭೆಯಲ್ಲಿ ವಿಶ್ವಕರ್ಮ ಸಂಘದ ಅಧ್ಯಕ್ಷ ಜಗದೀಶ ಆಚಾರ್ಯ ಅವರು ತಮ್ಮ ಮೂಡಿಗೆರೆಯ ವಿಶ್ವಕರ್ಮ ಸಮುದಾಯವು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜಯಪ್ರಕಾಶ್ ಹೆಗ್ಡೆ ಅವರಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದ್ದಾರೆ.
ನಾಳೆಗಳ ನೆಮ್ಮದಿಗಾಗಿ, ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುವುದು ಜನಪ್ರತಿನಿಧಿಯ ಕರ್ತವ್ಯ. ತಾನು ಗೆದ್ದ ಕ್ಷೇತ್ರಕ್ಕೆ ಮತ್ತೆ ಬಾರದಿದ್ದರೆ ಆತ ಜನಪ್ರತಿನಿಧಿ ಎಂದೆನಿಸುವುದಿಲ್ಲ. ಸಂಸದನಾಗಿ ಅಲ್ಪ ಅವಧಿಯಲ್ಲಿ ಜನಪರ ಕಾರ್ಯಗಳನ್ನು ಮಾಡಿದ್ದ ಪರಿಣಾಮ ಇಂದು ನೀವೆಲ್ಲ ಪ್ರೀತಿ ತೋರಿಸಿದ್ದೀರಿ. ಅಭಿವೃದ್ಧಿಯ ಬಗ್ಗೆ, ಮಾಡಿದ ಕೆಲಸಗಳ ಬಗ್ಗೆ ಮಾತನಾಡುವುದಾದರೆ ನನ್ನಲ್ಲಿ ಸಮಯವಿದೆ, ಕೇವಲ ವೈಯಕ್ತಿಕ ಠೀಕೆಗಳಿಗೆ, ನವಿಲುಗರಿ ಮರಿ ಹಾಕುವ ಕತೆ ಹೇಳಲು ಸಮಯವಿಲ್ಲ ಎಂದರು.
ಮೂಡಿಗೆರೆಯ ವಿಶ್ವಕರ್ಮ ಸಮುದಾಯದ ಪ್ರಮುಖರು ಈ ಸಂದರ್ಭದಲ್ಲಿ ಹಾಜರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…