ಮುಲ್ಕಿ: ನಮ್ಮ ಮಣ್ಣಿನ ಮೂಲ ಸತ್ವದ ಫಲವೇ ಬಿಸು. ಪ್ರಕೃತಿ ಬಿಟ್ಟು ತುಳುನಾಡು ಇಲ್ಲ. ಪ್ರಕೃತಿ ನಾಶವಾಗಿದ್ದರ ಫಲವೇ ಇಂದಿನ ಹವಾಮಾನ ವೈಪರೀತ್ಯ ಎಂದು ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ಹೇಳಿದರು.
ಸಸಿಹಿತ್ಲು ರಂಗ ಸುದರ್ಶನ ಅಶ್ರಯದಲ್ಲಿ ಆಯೋಜಿಸಲಾದ ಬಿಸುರಂಗ ಪರ್ಬ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಯುವ ಜನಾಂಗಕ್ಕೆ ಕರಾವಳಿಯ ತುಳುವರ ಹೊಸ ವರ್ಷ ವಿಷು ಹಬ್ಬದ ಮಹತ್ವವನ್ನು ತಿಳಿಸುವ ಕಾರ್ಯವಾಗಬೇಕು ಎಂದರು.
ಸಸಿಹಿತ್ಲು ಭಗವತಿ ದೇವಸ್ಥಾನದ ಅನುವಂಶಿಕ ಮೊತ್ತೇಸರ ಶ್ರೀನಿವಾಸ ಯಾನೆ ಅಪ್ಪು ಪೂಜಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ನಮ್ಮ ನೆಲದ ಸಂಸ್ಕೃತಿ, ಸಂಸ್ಕಾರದ ಬಗ್ಗೆ ಎಳೆಯರಿಗೆ ತಿಳಿಸುವ ಕಾರ್ಯ ನಡೆಯಬೇಕು. ವೈಜ್ಞಾನಿಕ ಸತ್ವದ ಸಹಿತ ಆಚರಣೆಯ ಮಹತ್ವಗಳನ್ನು ತಿಳಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ ಎಂದರು. ಗುಜರಾತಿನ ಹೋಟೆಲ್ ಉದ್ಯಮಿ ಸುವಾಸಿನಿ ನಾಯ್ಕ್ ಬಿಸು ಕಣಿ ಇಟ್ಟು ಜಾನಪದೀಯವಾಗಿ ಕಾರ್ಯಕ್ರಮ ಉದ್ಘಾಟಿಸಿದರು. ಶಿಕ್ಷಕ ಸೇವೆಯಲ್ಲಿ ಐವತ್ತು ವರ್ಷ ಪೂರೈಸಿದ ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನ ಆಡಳಿತ ಸಮಿತಿ ಅಧ್ಯಕ್ಷ ವಾಮನ ಇಡ್ಯ ಮತ್ತು ಸಾಧಕ ಭಾಸ್ಕರ ಸುವರ್ಣ ಸಸಿಹಿತ್ತು ರವರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.
ಮಂಗಳೂರಿನ ಯೋಜಕ ಇಂಡಿಯದ ಆಡಳಿತ ನಿರ್ದೇಶಕ ಜಗದೀಶ ಬೋಳೂರು ಮತ್ತು ಹಳೆಯಂಗಡಿ ಪಿ.ಸಿ.ಎ. ಬ್ಯಾಂಕಿನ ಕಾರ್ಯನಿರ್ವಾಹಕ అధిಕಾరి ಹಿಮಕರ ಸುವರ್ಣ, ಬಜ್ಜೆ ವ್ಯವಸಾಯ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಮೋನಪ್ಪ ಶೆಟ್ಟಿ ಎಕ್ಕಾರು , ಗ್ರೀಷ್ಮ ಕಟೀಲು ರಂಗ ಸುದರ್ಶನ ಸಂಸ್ಥೆಯ ನಿರ್ದೇಶಕ ಪರಮಾನಂದ ವಿ. ಸಾಲಿಯಾನ್ , ರಾಜೇಂದ್ರ ಕುಮಾರ್ ಎಕ್ಕಾರು,ಉಪನ್ಯಾಸಕ ಎಸ್.ಆರ್. ಪ್ರಭಾತ್, ಎಸ್.ಆರ್. ಪ್ರದೀಪ್, ಟಿವಿ ನಿರೂಪಕ ನವೀನ್ ಶೆಟ್ಟಿ ಎಡ್ಡೆ ಮಾರ್ ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…