ಕಡಬ.ಎಪ್ರಿಲ್ 13: ಮೊಸಳೆಯ ಮೃತದೇಹವೊಂದು ಕುಮಾರಧಾರಾ ನದಿಯ ಪಂಜ – ಕಡಬ ಸಂಪರ್ಕ ರಸ್ತೆಯಲ್ಲಿ ಸಿಗುವ ಪುಳಿಕುಕ್ಕು ಸೇತುವೆಯ ಕೆಳಭಾಗದಲ್ಲಿ ಪತ್ತೆಯಾಗಿದೆ.

ಸುಮಾರು 3ವರ್ಷದ ಮೊಸಳೆಯ ಮೃತದೇಹ ತೇಲುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪಂಜ ವಲಯ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬಂದಿ ಅಗಮಿಸಿ ಮೃತದೇಹವನ್ನು ತೆರವು ಮಾಡಿದ್ದಾರೆ.
. ಮೊಸಳೆಯ ಮರಣೋತ್ತರ ಪರೀಕ್ಷೆಯನ್ನು ವೈದ್ಯರು ನಡೆಸಿದ ಸಂದರ್ಭದಲ್ಲಿ ಮೊಸಳೆಯ ಹೊಟ್ಟೆಯಲ್ಲಿ ಪ್ಲಾಸ್ಟಿಕ್ ಸುತ್ತಿದ ಕೋಳಿ ತ್ಯಾಜ್ಯ, ಪ್ಯಾಂಪರ್ಸ್ ಕಟ್ಟು ಗಳು ದೇಹದಲ್ಲಿ ಸೇರಿಕೊಂಡು ಜೀರ್ಣವಾಗದೆ ಸತ್ತಿರ ಬಹುದು ಎನ್ನಲಾಗಿದೆ.



