ಮಂಗಳೂರಿನಲ್ಲಿ ಮೋದಿ ಜಿ…
ಎಡ ಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ
ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ
ಲಾಲ್ ಭಾಗ್, ಬಲ್ಲಾಳ್ ಭಾಗ್, ಪಿವಿಎಸ್ ಮೂಲಕ ರೋಡ್ ಶೋ
ರೋಡ್ ಶೋ ಹಿನ್ನೆಲೆಯಲ್ಲಿ ನಗರದಲ್ಲಿ ಭಾರಿ ಭದ್ರತೆ
ಲೋಕಸಭೆ ಚುನಾವಣಾ ಪ್ರಚಾರಕ್ಕೆಂದು ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಇದಕ್ಕೂ ಮುನ್ನ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬಿಜೆಪಿ ವಿಜಯಸಂಕಲ್ಪ ಬೃಹತ್ ಸಮಾವೇಶ ಮುಗಿಸಿದ ಬಳಿಕ ಪ್ರಧಾನಿ ಮೋದಿ ಮಂಗಳೂರು ತಲುಪಿದರು. ವಿಶೇಷ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಅವರು, ಕೆಂಜಾರಿನಿಂದ ನೇರವಾಗಿ ಲೇಡಿಹಿಲ್ ನಾರಾಯಣ ಗುರು ವೃತ್ತಕ್ಕೆ ಆಗಮಿಸಿ ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆಯನ್ನ ಮಾಡಿದ್ದಾರೆ.




ಬಳಿಕ ರೋಡ್ ಶೋ ಆರಂಭವಾಗಿದೆ. ಲಾಲ್ ಭಾಗ್, ಬಲ್ಲಾಳ್ ಭಾಗ್, ಪಿವಿಎಸ್ ಮೂಲಕ ರೋಡ್ ಶೋ ಬಂದು ನವಭಾರತ ವೃತ್ತದಲ್ಲಿ ರೋಡ್ ಶೋ ಸಮಾಪ್ತಿಯಾಗಿದೆ. ತೆರೆದ ವಾಹನದಲ್ಲಿ ಮೋದಿ ಎಡ ಭಾಗದಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಹಾಗೂ ಬಲ ಭಾಗದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ನಿಂತಿದ್ದರು. ಪ್ರಧಾನಿಗಳು ಮಾರ್ಗ ಉದ್ದಕ್ಕೂ ಬಿಜೆಪಿ ಲೋಗೋ ಹಿಡಿದು ಜನರಿಗೆ ತೋರಿಸುತ್ತಾ ಕೈ ಬೀಸಿ ಧನ್ಯವಾದಗಳನ್ನು ಹೇಳ್ತಾ ಇದ್ದರು.. ಬಳಿಕ ಇಲ್ಲಿಂದ ಪ್ರಧಾನಿ ಮೋದಿಯವರು ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿ, ವಿಶೇಷ ವಿಮಾನದ ಮೂಲಕ ಕೊಚ್ಚಿಗೆ ಪ್ರಯಾಣ ಬೆಳೆಸಲಿದ್ದಾರೆ. ಪ್ರಧಾನಿ ರೋಡ್ ಶೋ ಹಿನ್ನೆಲೆಯಲ್ಲಿ ನಗರದಲ್ಲಿ ಭಾರಿ ಭದ್ರತೆ ಕೈಗೊಳ್ಳಲಾಗಿತ್ತು…




ನಾರಾಯಣಗುರು ವೃತ್ತದಿಂದ ತೆರೆದ ವಾಹನದಲ್ಲಿ ಆರಂಭವಾದ ರೋಡ್ ಶೋ ವೇಳೆ ರಸ್ತೆಯ ಇಕ್ಕೆಲಗಳಲ್ಲಿ ಕಿಕ್ಕಿರಿದು ನೆರೆದಿದ್ದ ಜನಸ್ತೋಮ, ಪ್ರಧಾನಿ ಕಂಡು ಜಯ ಘೋಷ ಮೊಳಗಿಸಿತು.



