ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮಂಗಳೂರು: ರಜೆಯಿಂದ ಉಳಿಯಿತು ಮಕ್ಕಳ ಪ್ರಾಣ. ಆರು ಅಂತಸ್ತಿನ ಶಾಲಾ ಕಟ್ಟಡದಿಂದ ಬೃಹತ್ ಮೇಲ್ಛಾವಣಿ ಕುಸಿತ, ತಪ್ಪಿದ ಭಾರೀ ಅನಾಹುತ.

ಉಳ್ಳಾಲ: ಸತತವಾಗಿ ಕಳೆದ ಮೂರು ದಿನಗಳಿ೦ದ ಸುರಿಯುತ್ತಿರುವ ಗಾಳಿ-ಮಳೆಗೆ ತಲಪಾಡಿಯ ದೇವಿನಗರದಲ್ಲಿನ ಶಾರದಾ ವಿದ್ಯಾಲಯದ ಆರು ಅಂತಸ್ತಿನ ಕಟ್ಟಡದ ಮೇಲೆ ಅಳವಡಿಸಲಾಗಿದ್ದ ಬೃಹದಾಕಾರದ ಶೀಟ್‌ ಛಾವಣಿಯು ಹಾರಿ ಕೆಳಗೆ ಬಿದ್ದಿದೆ. ಜಿಲ್ಲಾಧಿಕಾರಿಗಳ ಆಜ್ಞೆಯಂತೆ ಶಾಲಾ-ಕಾಲೇಜುಗಳಿಗೆ ರಜೆಯಿದ್ದುದರಿಂದ ಅನೇಕ ವಿದ್ಯಾರ್ಥಿಗಳ ಜೀವ ಉಳಿದಿದೆ.

ಬುಧವಾರ ಬೆಳಿಗ್ಗೆ ಸುಮಾರು 9 ಗಂಟಿ ವೇಳೆಗೆ ಘಟನೆ ನಡೆದಿದ್ದು, ದೇವಿನಗರದ ಶಾರದಾ ವಿದ್ಯಾಲಯದ ಆವರಣದ ಒಳಗಿನ ಆರು ಇತ್ತೀಚಿಗೆ ಅಳವಡಿಸಲಾಗಿದ್ದ ಬೃಹದಾಕಾರದ ಶೀಟ್‌ ಚಾವಣಿ ಹಾಗೂ ಶೀಟ್‌ ಅಳವಡಿಸಲು ಹಾಕಲಾಗಿದ್ದ ಭಾರೀ ಗಾತ್ರದ ಕಬ್ಬಿಣದ ಸಲಾಕೆಗಳು ಕೆಳಗೆ ಉರುಳಿ ಬಿದ್ದು ಅನೇಕ ವಾಹನಗಳು ಹಾನಿಗೊಂಡಿವೆ.

ಎಡೆಬಿಡದೆ ಸುರಿಯುತ್ತಿರುವ ಮಳೆಯ ಹಿನ್ನಲೆಯಲ್ಲಿ ಕಳೆದೆರಡು ದಿವಸಗಳಿ೦ದ ಜಿಲ್ಲಾಡಳಿತವು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದರಿಂದ ನಿನ್ನೆ ವಿದ್ಯಾರ್ಥಿಗಳು ಶಾಲೆಗೆ ಬಂದಿರಲಿಲ್ಲ. ಹಾಗಾಗಿ ಸಂಭವನೀಯ ಅನಾಹುತವೊಂದು ತಪ್ಪಿದ೦ತಾಗಿದೆ. ಶಾಲಾಡಳಿತವು ಕ್ರೇನ್‌ ಮುಖಾಂತರ ಧರೆಗುರುಳಿರುವ ಶೀಟ್‌, ಕಬ್ಮಿಣದ ಸಲಾಕೆಗಳನ್ನು ತೆರವುಗೊಳಿಸುವ ಕೆಲಸ ನಡಸುತ್ತಿದೆ.

ಸಾಂಸ್ಕೃತಿಕ ಮತ್ತು ಧಾರ್ಮಿಕ ಮೌಲ್ಯಗಳ ಶಿಕ್ಷಣದ ಹೆಸರಿನಲ್ಲಿ ಎಲ್‌.ಕೆ.ಜಿ ವಿದ್ಯಾರ್ಥಿಗಳಿಗೆ ದುಬಾರಿ ಶುಲ್ಕ ವಿಧಿಸುವ ಶಾರದ ವಿದ್ಯಾಲಯದ ಈ ಬೇಜವಾಬ್ದಾರಿತನಕ್ಕೆ ಪೋಷಕರು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಜಿಲ್ಲಾಡಳಿತವು ಇ೦ತಹ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆ೦ದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!