ಉಳ್ಳಾಲ: ಸತತವಾಗಿ ಕಳೆದ ಮೂರು ದಿನಗಳಿ೦ದ ಸುರಿಯುತ್ತಿರುವ ಗಾಳಿ-ಮಳೆಗೆ ತಲಪಾಡಿಯ ದೇವಿನಗರದಲ್ಲಿನ ಶಾರದಾ ವಿದ್ಯಾಲಯದ ಆರು ಅಂತಸ್ತಿನ ಕಟ್ಟಡದ ಮೇಲೆ ಅಳವಡಿಸಲಾಗಿದ್ದ ಬೃಹದಾಕಾರದ ಶೀಟ್ ಛಾವಣಿಯು ಹಾರಿ ಕೆಳಗೆ ಬಿದ್ದಿದೆ. ಜಿಲ್ಲಾಧಿಕಾರಿಗಳ ಆಜ್ಞೆಯಂತೆ ಶಾಲಾ-ಕಾಲೇಜುಗಳಿಗೆ ರಜೆಯಿದ್ದುದರಿಂದ ಅನೇಕ ವಿದ್ಯಾರ್ಥಿಗಳ ಜೀವ ಉಳಿದಿದೆ.
ಬುಧವಾರ ಬೆಳಿಗ್ಗೆ ಸುಮಾರು 9 ಗಂಟಿ ವೇಳೆಗೆ ಘಟನೆ ನಡೆದಿದ್ದು, ದೇವಿನಗರದ ಶಾರದಾ ವಿದ್ಯಾಲಯದ ಆವರಣದ ಒಳಗಿನ ಆರು ಇತ್ತೀಚಿಗೆ ಅಳವಡಿಸಲಾಗಿದ್ದ ಬೃಹದಾಕಾರದ ಶೀಟ್ ಚಾವಣಿ ಹಾಗೂ ಶೀಟ್ ಅಳವಡಿಸಲು ಹಾಕಲಾಗಿದ್ದ ಭಾರೀ ಗಾತ್ರದ ಕಬ್ಬಿಣದ ಸಲಾಕೆಗಳು ಕೆಳಗೆ ಉರುಳಿ ಬಿದ್ದು ಅನೇಕ ವಾಹನಗಳು ಹಾನಿಗೊಂಡಿವೆ.
ಎಡೆಬಿಡದೆ ಸುರಿಯುತ್ತಿರುವ ಮಳೆಯ ಹಿನ್ನಲೆಯಲ್ಲಿ ಕಳೆದೆರಡು ದಿವಸಗಳಿ೦ದ ಜಿಲ್ಲಾಡಳಿತವು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದರಿಂದ ನಿನ್ನೆ ವಿದ್ಯಾರ್ಥಿಗಳು ಶಾಲೆಗೆ ಬಂದಿರಲಿಲ್ಲ. ಹಾಗಾಗಿ ಸಂಭವನೀಯ ಅನಾಹುತವೊಂದು ತಪ್ಪಿದ೦ತಾಗಿದೆ. ಶಾಲಾಡಳಿತವು ಕ್ರೇನ್ ಮುಖಾಂತರ ಧರೆಗುರುಳಿರುವ ಶೀಟ್, ಕಬ್ಮಿಣದ ಸಲಾಕೆಗಳನ್ನು ತೆರವುಗೊಳಿಸುವ ಕೆಲಸ ನಡಸುತ್ತಿದೆ.
ಸಾಂಸ್ಕೃತಿಕ ಮತ್ತು ಧಾರ್ಮಿಕ ಮೌಲ್ಯಗಳ ಶಿಕ್ಷಣದ ಹೆಸರಿನಲ್ಲಿ ಎಲ್.ಕೆ.ಜಿ ವಿದ್ಯಾರ್ಥಿಗಳಿಗೆ ದುಬಾರಿ ಶುಲ್ಕ ವಿಧಿಸುವ ಶಾರದ ವಿದ್ಯಾಲಯದ ಈ ಬೇಜವಾಬ್ದಾರಿತನಕ್ಕೆ ಪೋಷಕರು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಜಿಲ್ಲಾಡಳಿತವು ಇ೦ತಹ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆ೦ದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…