ಇತರೆ

“ಯಕ್ಷಧ್ರುವ ಟ್ರಸ್ಟ್ ಸಾಗರದಾಚೆಗೂ ಬಾಂಧವ್ಯ ಬೆಸೆದಿದೆ”; -ವಾಸುದೇವ ಐತಾಳ್

ಸುರತ್ಕಲ್: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಇದರ ಸುರತ್ಕಲ್ ಘಟಕದ ಚತುರ್ಥ ವಾರ್ಷಿಕೋತ್ಸವ ಕಾರ್ಯಕ್ರಮವು ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು.


ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.
ದೀಪ ಪ್ರಜ್ವಲನೆಗೈದ ಯಕ್ಷಧ್ರುವ ಯಕ್ಷ ಶಿಕ್ಷಣ ಪ್ರಧಾನ ಸಂಚಾಲಕ ವಾಸುದೇವ ಐತಾಳ್ ಯುಎಸ್ ಎ ಮಾತನಾಡಿ, “ಅಮೇರಿಕದಲ್ಲಿ ಯಕ್ಷಗಾನ ಮಾಡಿಸುವ ಮೂಲಕ ಅಲ್ಲಿನ ಜನರಿಗೂ ನಮ್ಮ ಕರಾವಳಿಯ ಸಂಸ್ಕೃತಿಯ ಪರಿಚಯ ಮಾಡಿದ ಕೀರ್ತಿ ಪಟ್ಲ ಸತೀಶ್ ಶೆಟ್ಟಿ ಅವರಿಗೆ ಸಲ್ಲಬೇಕು. ಯಕ್ಷಧ್ರುವ ಟ್ರಸ್ಟ್ ಈ ಮೂಲಕ ಸಾಗರದಾಚೆಗೂ ಯಕ್ಷಪ್ರೇಮಿಗಳ ಬಾಂಧವ್ಯವನ್ನು ಬೆಸೆದಿದೆ. ಯುರೋಪ್ ರಾಷ್ಟ್ರಗಳಲ್ಲಿ ಪಟ್ಲ ತಂಡದೊಂದಿಗೆ ಸಂಚಾರ ನಡೆಸಿರುವುದು ನನ್ನ ಜೀವನದ ಅವಿಸ್ಮರಣೀಯ ದಿನಗಳು. ಮುಂದೆಯೂ ಅಮೇರಿಕದಲ್ಲಿ ಪಟ್ಲರ ಕಾರ್ಯಕ್ರಮಕ್ಕೆ ಸಹಕಾರ ನೀಡುತ್ತೇನೆ” ಎಂದು ಹೇಳಿದರು.


ಬಳಿಕ ಮಾತನಾಡಿದ ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಅವರು, “ನನ್ನನ್ನು ತಾಯಿ ಕಟೀಲು ದುರ್ಗೆ ಯಕ್ಷಗಾನ ಕಲಾವಿದರ ಸೇವೆ ಮಾಡುವಂತೆ ಅನುಗ್ರಹ ನೀಡಿದ್ದಾಳೆ. ಅವಳ ಅಣತಿಯಂತೆ ನಾನಿಂದು ಯಕ್ಷಗಾನ ಕಲಾವಿದರಿಗೆ ನೆರವು ನೀಡುತ್ತಿದ್ದೇನೆ. ಸುರತ್ಕಲ್ ನಲ್ಲಿ ಸಂಘಟನೆಯ ಘಟಕ ಬಹಳ ಚೆನ್ನಾಗಿ ಕೆಲಸ ಮಾಡುತ್ತಿದೆ. ಇದೇ ರೀತಿ ಇನ್ನಷ್ಟು ಉತ್ತಮ ಕೆಲಸವನ್ನು ಸುರತ್ಕಲ್ ಘಟಕ ಮಾಡಲಿ” ಎಂದು ಶುಭ ಹಾರೈಸಿದರು.


ವೇದಿಕೆಯಲ್ಲಿ ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಗೌರವಾಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ, ಅಧ್ಯಕ್ಷ ಸುಧಾಕರ ಎಸ್. ಪೂಂಜ, ಉಪಾಧ್ಯಕ್ಷ ಎಂ.ಜಿ. ರಾಮಚಂದ್ರ ರಾವ್, ಲೀಲಾಧರ ಶೆಟ್ಟಿ ಕಟ್ಲ, ಪಿ.ಕೃಷ್ಣಮೂರ್ತಿ ಸುರತ್ಕಲ್, ನಾರಾಯಣ ಶೆಟ್ಟಿ ಕಟ್ಲ, ಚಂದ್ರಶೇಖರ ಮಾಡ ಕುದ್ರಾಡಿಗುತ್ತು, ಮಹಿಳಾ ಘಟಕದ ಗೌರವಾಧ್ಯಕ್ಷೆ ಆರತಿ ಆಳ್ವ, ಗೋವಿಂದ ದಾಸ ಕಾಲೇಜ್ ನಿವೃತ್ತ ಉಪ ಪ್ರಾಂಶುಪಾಲ ಪ್ರೊ. ರಮೇಶ್ ಭಟ್ ಯಸ್.ಜಿ., ಟ್ರಸ್ಟಿಗಳಾದ ಕೃಷ್ಣ ಶೆಟ್ಟಿ ಶ್ರೀ ದ್ವಾರ, ಸಹನಾ ರಾಜೇಶ್ ರೈ, ದೇವೇಂದ್ರ ಕೆ ಶೆಟ್ಟಿ, ನಾರಾಯಣ ಶೆಟ್ಟಿ, ಸಂತೋಷ್ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.


ಇದೇ ಸಂದರ್ಭದಲ್ಲಿ ಹಿರಿಯ ಯಕ್ಷಗಾನ ಕಲಾವಿದ ನೆಲ್ಲಿಕಟ್ಟೆ ನಾರಾಯಣ ಹಾಸ್ಯಗಾರ್ ಅವರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ಹಿರಿಯ ತಾಳಮದ್ದಳೆ ಕಲಾವಿದ ಮಹಾಬಲ ಶೆಟ್ಟಿ ಜೋಕಟ್ಟೆ, ಹಿರಿಯ ತಾಳಮದ್ದಳೆ ಕಲಾವಿದೆ ಜಯಂತಿ ಹೊಳ್ಳ ಕೃಷ್ಣಾಪುರ, ಹಿರಿಯ ತಾಳಮದ್ದಳೆ ಕಲಾವಿದ ವಾಸುದೇವ ಆಚಾರ್ಯ ಕುಳಾಯಿ, ಯಕ್ಷಗಾನ ಕಲಾವಿದ ಕರುಣಾಕರ ಪೂಜಾರಿ ಮಧ್ಯ, ಯಕ್ಷಗಾನ ಸೇವಾಕರ್ತ ಲಿಂಗಪ್ಪ ಶೆಟ್ಟಿ ಕೃಷ್ಣಾಪುರ ಅವರನ್ನು ಸನ್ಮಾನಿಸಲಾಯಿತು.


ಸಂಘಟನೆಯ ವತಿಯಿಂದ ಇತ್ತೀಚಿಗೆ ದುರ್ಮರಣಕ್ಕೀಡಾದ ಯಕ್ಷ ಸಿರಿ ತರಗತಿಯ ವಿದ್ಯಾರ್ಥಿ ದಿ| ಯಶ್ವಿತ್ ಅಗರಮೇಲು ಅವರ ಪೋಷಕರಿಗೆ ಆರ್ಥಿಕ ಸಹಾಯ ಸಲ್ಲಿಸಲಾಯಿತು.
ಪಟ್ಲ ಫೌಂಡೇಶನ್ ಟ್ರಸ್ಟ್ ಗೆ ನೂತನ ಟ್ರಸ್ಟ್ ಗಳಾಗಿ ಚರಣ್ ಜೆ ಶೆಟ್ಟಿ ಕುಳಾಯಿಗುತ್ತು, ರವಿ ಶೆಟ್ಟಿ ಅಗರ ಮೇಲು, ಧನಪಾಲ್ ಶೆಟ್ಟಿಗಾರ್ ತಡಂಬೈಲ್, ಸವಿತಾ ಭವಾನಿಶಂಕರ್ ಶೆಟ್ಟಿ ಬಾಳ ಸೇರ್ಪಡೆಗೊಂಡರು.
ಯಕ್ಷಧ್ರುವ ಪಟ್ಲ ಫೌಂಡೇಶನ್ ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಜಗನ್ನಾಥ ಶೆಟ್ಟಿ ಬಾಳ ವರದಿ ವಾಚಿಸಿದರು. ಅಧ್ಯಕ್ಷ ಸುಧಾಕರ್ ಎಸ್. ಪೂಂಜಾ ಅವರು ಅತಿಥಿಗಳನ್ನು ಸ್ವಾಗತಿಸಿದರು.
ಘಟಕದ ಪ್ರಧಾನ ಕಾರ್ಯದರ್ಶಿ ಬಾಳ ಗಂಗಾಧರ ಪೂಜಾರಿ ಚೇಳಾಯರು ಧನ್ಯವಾದ ಸಮರ್ಪಿಸಿದರು. ಸುಧಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಪಾವಂಜೆ ಮೇಳದಿಂದ ಅಯೋಧ್ಯಾ ದೀಪಾ ಯಕ್ಷಗಾನ ಪ್ರದರ್ಶನಗೊಂಡಿತು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…

5 days ago

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…

5 days ago

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…

5 days ago

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…

5 days ago

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…

5 days ago

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…

5 days ago