ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ.
ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮಂಜುನಾಥ್ ಅವರು ಮಂಗಳೂರಿನಿಂದ ಪುತ್ತೂರುಕಡೆಗೆ ತೆರಳುತ್ತಿದ್ದ ವೇಳೆ ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಇವರ ಕಾರಿಗೆ ಹರಿಯಾಣ ಮೂಲದ ಕಾರೊಂದ ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಕೈ ಸನ್ನೆಯ ಮೂಲಕ ಪ್ರಶ್ನಿಸಿದಕ್ಕೆ ಅಪಘಾತ ಎಸಗಿದ ಕಾರು ಮುಂದೆ ಹೋಗಿ ಕರಿಂಗಾಣ ಕ್ರಾಸ್ ಎಂಬಲ್ಲಿ ಅಡ್ಡವಾಗಿ ಇರಿಸಿ ಮಂಜುನಾಥ್ ಹಾಗೂ ಅವರ ಪತ್ನಿ ಪೂರ್ಣಿಮಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.
ಇದೇ ಸಂದರ್ಭದಲ್ಲಿ ಪೂರ್ಣಿಮಾ ಅವರ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಹಲ್ಲೆಯಿಂದ ಮಂಜುನಾಥ್ ಅವರ ಕಣ್ಣಿನ ಮೇಲೆ ಪೆಟ್ಟು ಬಿದ್ದಿದ್ದು ಅವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಘಟನೆ ನಡೆದ ಕೂಡಲೇ ಸಂಚಾರ ಪೋಲೀಸರು ಬೇಟಿ ನೀಡಿ ವಾಹನವನ್ನು ಹಾಗೂ ಸ್ಥಳದಲ್ಲಿದ್ದವರನ್ನು ವಶಕ್ಕೆ ಪಡೆದುಕೊಂಡಿದ್ದು, ಬಂಟ್ವಾಳ ನಗರ ಪೋಲೀಸ್ ಇನ್ಸ್ ಪೆಕ್ಟರ್ ಆನಂತ ಪದ್ಮನಾಭ ಅವರು ವಿಚಾರಣೆ ನಡೆಸುತ್ತಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಬಜರಂಗದಳ, ವಿಶ್ವಹಿಂದೂಪರಿಷತ್ ಕಲ್ಲಡ್ಕ ಪ್ರಖಂಡ ಖಂಡನೆ ವ್ಯಕ್ತಪಡಿಸಿದ್ದಾರೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…