ಉಡುಪಿ: ಬೆಂಗಳೂರಿನ ಇನ್‌ಫೋಸಿಸ್ ಫೌಂಡೇಷನ್ 15.8 ಕೋಟಿ ರೂ. ವೆಚ್ಚದಲ್ಲಿ ಉಡುಪಿಯ ಯಕ್ಷಗಾನ ಕಲಾರಂಗದ ಮೂಲಕ ನಿರ್ಮಿಸಿದ ಇನಫೋಸಿಸ್ ಫೌಂಡೇಷನ್ ಯಕ್ಷಗಾನ ಡೆವಲಪ್‌ಮೆಂಟ್, ಟ್ರೈನಿಂಗ್ ಆ್ಯಂಡ್ ರಿಸರ್ಚ್ ಸೆಂಟ್ (ಐವೈಸಿ)ಯ ನೂತನ ಕಟ್ಟಡದ ಲೋಕಾರ್ಪಣೆ ಇದೇ ಬರುವ ಎ.21ರಂದು ನಡೆಯಲಿದೆ ಎಂದು ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್ ತಿಳಿಸಿದ್ದಾರೆ.
ಇನ್‌ಫೋಸಿಸ್ ಯಕ್ಷಗಾನ ಕೇಂದ್ರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಟ್ಟಡದಲ್ಲಿ 380 ಮಂದಿ ಕುಳಿತು ವೀಕ್ಷಿಸಬಹುದಾದ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ ಸಭಾಂಗಣ, ಗ್ರೀನ್‌ರೂಮ್, ಕಾನ್ಫರೆನ್ಸ್ ಹಾಲ್, ಬೋರ್ಡ್ ರೂಮ್ ಸೇರಿದಂತೆ ಸಾಂಸ್ಕೃತಿಕ ಚಟುವಟಿಕೆ ನಡೆಯಲು ಬೇಕಾದ ಎಲ್ಲಾ ಸೌಲಭ್ಯಗಳು ಉಚಿತವಾಗಿ ದೊರೆಯಲಿವೆ ಎಂದರು.
ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ಅವರು ಮಾತನಾಡಿ, ಕಲಾರಂಗ ಖರೀದಿಸಿದ 35 ಸೆನ್ಸ್ ಜಾಗದಲ್ಲಿ ಈ ಭವ್ಯ ಕಟ್ಟಡ ತಲೆ ಎತ್ತಿದೆ. ಯಕ್ಷಗಾನ ಕಲಾರಂಗ ಸುವರ್ಣ ಮಹೋತ್ಸವವನ್ನು ಆಚರಿಸುತ್ತಿರುವ ವರ್ಷದಲ್ಲೇ ಈ ಕಟ್ಟಡ ಉದ್ಘಾಟನೆಗೊಳ್ಳುತ್ತಿರುವುದು ಸಂಸ್ಥೆಗೆ ಹೆಮ್ಮೆಯ ವಿಷಯವಾಗಿದೆ ಎಂದರು.
ಕಟ್ಟಡದ ಉದ್ಘಾಟನಾ ಕಾರ್ಯಕ್ರಮಗಳು ಮೂರು ದಿನಗಳ ಕಾಲ ನಡೆಯಲಿವೆ. ಎ.21ರಂದು ಬೆಳಗ್ಗೆ 9ಗಂಟೆಗೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಹಾಗೂ ಶ್ರೀಸುಶ್ರೀಂದ್ರತೀರ್ಥರ ಅನುಗ್ರಹ ಮಂತ್ರಾಕ್ಷತೆಯೊಂದಿಗೆ ಯಕ್ಷಗಾನ ಪರಿಕರಗಳೊಂದಿಗೆ ಮೆರವಣಿಗೆಯಲ್ಲಿ ನೂತನ ಕಟ್ಟಡ ಪ್ರದೇಶಕ್ಕೆ ಆಗಮಿಸಲಾಗುವುದು ಎಂದರು.
ಬೆಳಗ್ಗೆ 10ಗಂಟೆಗೆ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರ ತೀರ್ಥರು, ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥರು, ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥರು, ಪಲಿಮಾರು ಮಠದಕಿರಿಯ ಯತಿಗಳಾದ ಶ್ರೀವಿದ್ಯಾರಾಜೇಶ್ವರ ತೀರ್ಥರು ಹಾಗೂ ಶೀರೂರು ಮಠದ ಶ್ರೀವೇದವರ್ಧನ ತೀರ್ಥರ ನೂತನ ಕಟ್ಟಡದ ದ್ವಾರಪೂಜೆ ನೆರವೇರಿಸಲಿದ್ದಾರೆ ಎಂದರು.
ಮಧ್ಯಾಹ್ನ 3:30ಕ್ಕೆ ಕಲಾರಂಗ-ಐವೈಸಿ ಸಭಾಂಗಣದಲ್ಲಿ ಕಟ್ಟಡವನ್ನು ಇನ್‌ಫೋಸಿಸ್‌ನ ಕಾರ್ಯನಿರ್ವಾಹಕ ಉಪಾಧ್ಯಕ್ಷ ಹಾಗೂ ಇನ್‌ಫೋಸಿಸ್ ಫೌಂಡೇಷನ್‌ನ ವಿಶ್ವಸ್ಥ ಸುನಿಲ್‌ಕುಮಾರ್ ಧಾರೇಶ್ವರ್ ಉದ್ಘಾಟಿಸಲಿದ್ದಾರೆ. ಮಾಹೆಯ ಪ್ರೊ ಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಯಕ್ಷಗಾನ ಕಲಾರಂಗದ ಎಸ್.ವಿ.ಭಟ್, ಪಿ.ಕಿಶನ್ ಹೆಗ್ಡೆ, ಪ್ರೊ.ನಾರಾಯಣ ಹೆಗಡೆ, ವಿಜಯ ಕುಮಾರ್ ಶೆಟ್ಟಿಗಾರ್, ಪ್ರೊ.ಸದಾಶಿವ ರಾವ್, ಬಿ.ಜಿ.ಶೆಟ್ಟಿ, ಅಶೋಕ ಎಂ., ಅನಂತರಾಜ್ ಉಪಾಧ್ಯ ಉಪಸ್ಥಿತರಿದ್ದರು.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…