ಕನ್ನಡ ಚಿತ್ರರಂಗದ ಹಿರಿಟ ನಟ ಹಾಗೂ ನಿರ್ಮಾಪಕ ದ್ವಾರಕೀಶ್ (81) ಅವರು ಮಂಗಳವಾರ ವಿಧಿವಶರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಅವರು ಹೃದಯಾಘಾತದಿಂದ ಇಂದು ಇಹಲೋಕ ತ್ಯಜಿಸಿದ್ದಾರೆಂದು ಮೂಲಗಳು ತಿಳಿಸಿವೆ.
ನಟ ದ್ವಾರಕೀಶ್ ಅವರು ಕನ್ನಡ ಚಿತ್ರರಂಗದಲ್ಲಿ ಬಹುದೊಡ್ಡ ಹೆಸರು ಮಾಡಿದ್ದಾರೆ. ಹಲವಾರು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಗಣನೀಯ ಸೇವೆ ಸಲ್ಲಿಸಿದ ಅವರನ್ನು ಪರಿಗಣಿಸಿ ಬೆಂಗಳೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ನೀಡಿದೆ.

ನಟರಾಗಿ, ನಿರ್ದೇಶಕ, ನಿರ್ಮಾಪಕರಾಗಿ ಹಲವಾರು ಚಿತ್ರಗಳ ಕೊಡುಗೆ ನೀಡಿರುವ ಅವರು ಕನ್ನಡ ಚಿತ್ರರಂಗಕ್ಕೆ ಕಲಾಸೇವೆ ಸಲ್ಲಿಸಿದ್ದಾರೆ. ಡಾ. ವಿಷ್ಣುವರ್ಧನ್, ಡಾ. ರಾಜ್‌ಕುಮಾರ್ ಹಾಗೂ ಅಂಬರೀಶ್‌ರಂತಹ ಮೇರು ನಟರೊಂದಿಗೆ ಹಿರಿಯ ತೆರೆಯಲ್ಲಿ ಮಿಂಚಿರುವ ನಟ ದ್ವಾರಕೀಶ್ ಅವರು ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಬರೋಬ್ಬರಿ 40ಕ್ಕೂ ಹೆಚ್ಚು ಸಿನಿಮಾಗಳ ನಿರ್ಮಾಣ ಮಾಡಿ ಸೈ ಎನಿಸಿಕೊಂಡಿರುವ ಅವರು ಕನ್ನಡ ಜನತೆಗೆ ಜನಪ್ರಿಯ ರಾಜಕುಳ್ಳ ಎಂದೇ ಪ್ರಿಯರಾಗಿದ್ರು.




