ಜನ ಮನದ ನಾಡಿ ಮಿಡಿತ

Advertisement

ಕೋಟ: ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ


ಉಡುಪಿ: ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಮನೆಯಲ್ಲೇ ಮತದಾನ ಕಾರ್ಯಕ್ರಮದಡಿ ಮತದಾನ ಮಾಡಿ ಕೆಲವೇ ಗಂಟೆಗಳಲ್ಲಿ ಕೊನೆಯುಸಿರೆಳೆದ ಘಟನೆ ಸಾಸ್ತಾನ ಪಾಂಡೇಶ್ವರದ ಚಡಗರ ಅಗ್ರಹಾರ ಎಂಬಲ್ಲಿ ಸಂಭವಿಸಿದೆ.


ನಿವೃತ್ತ ಗ್ರಾಮಲೆಕ್ಕಾಧಿಕಾರಿ ದಿ. ನಾರಾಯಣ ಉಪಾಧ್ಯ ಅವರ ಪತ್ನಿ ಪಿ. ಯಶೋದಾ ನಾರಾಯಣ ಉಪಾಧ್ಯ (83) ಮೃತಪಟ್ಟ ಮಹಿಳೆ. ಅವರಿಗೆ ಸಣ್ಣ ಪ್ರಮಾಣದ ಎದೆನೋವು, ಸುಸ್ತು ಕಾಣಿಸಿಕೊಂಡಿತ್ತು. ಸೋಮವಾರ ಅವರಿಗೆ ಮನೆಯಿಂದಲೇ ಮತದಾನಕ್ಕೆ ಸಮಯ ನಿಶ್ಚಯವಾಗಿತ್ತು. ಮನೆಯವರು ಆಸ್ಪತ್ರೆಗೆ ಹೋಗುವ ಎಂದು ಎಷ್ಟೇ ಒತ್ತಾಯಿಸಿದರೂ‌ ಅಜ್ಜಿ ಒಪ್ಪಲಿಲ್ಲ. ಮತದಾನ ಮುಗಿಸಿಯೇ ನಾನು ಆಸ್ಪತ್ರೆಗೆ ತೆರಳುವುದು ಎಂದು ಹಠ ಹಿಡಿದಿದ್ದರು. ಅದರಂತೆ ಕಾದು ಮತದಾನ ಮಾಡಿ ಬಳಿಕ ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ತೆರಳಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಅನಾರೋಗ್ಯ ಉಲ್ಬಣಗೊಂಡು ರಾತ್ರಿ 9 ಗಂಟೆಗೆ ಅವರು ಕೊನೆಯುಸಿರೆಳೆದಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!