ಮುಲ್ಕಿ: ಇತಿಹಾಸ ಪ್ರಸಿದ್ಧ ಮುಲ್ಕಿ ಒಳಲಂಕೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಮುಲ್ಕಿ ರಥೋತ್ಸವ ವಿಜೃಂಭಣೆಯಿಂದ ನಡೆಯಿತು
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ನಜರು ಕಾಣಿಕೆ ಮೆರವಣಿಗೆ ದೇವಳಕ್ಕೆ ತಲುಪುವುದು,ಕ್ಷೇತ್ರದಲ್ಲಿ ಅರ್ಚಕರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ, ಶ್ರೀ ವೆಂಕಟರಮಣ ದೇವರಿಗೆ ಅಭಿಷೇಕ ಮಹಾಪೂಜೆ, ಮಧ್ಯಾಹ್ನ ಮಹಾ ನೈವೇದ್ಯ, ಮಂಗಳಾರತಿ, ಈ ದೇವರು ಯಜ್ಞ ಮಂಟಪಕ್ಕೆ ಹೊರಡುವ ಕಾರ್ಯಕ್ರಮ, ಯಜ್ಞ ಮಹಾಪೂರ್ಣಾಹುತಿ ನಡೆಯಿತು.
ಸಂಜೆ ಯಜ್ಞ ಮಂಟಪದಿಂದ ದೇವರ ದರ್ಶನ ಸಹಿತ ಶ್ರೀ ದೇವರ ಉತ್ಸವ ಹೊರಡುವ ಕಾರ್ಯಕ್ರಮ ನಡೆದು , ಬಲಿಪ್ರದಾನ, ರಥ ಬಲಿ, ಭೂತಬಲಿ, ಅಣ್ಣಪ್ಪ ದೈವದ ಭೇಟಿ, ಸಂಜೆ 6:30 ಗಂಟೆಗೆ ಬ್ರಹ್ಮರಥಾರೋಹಣ, ಭೂರಿ ಸಮಾರಾಧನೆ ನಡೆಯಿತು
ರಾತ್ರಿ ಬ್ರಹ್ಮರಥದಲ್ಲಿ ದೀಪ ನಮಸ್ಕಾರ, ರಾತ್ರಿ ಪೂಜೆ, ಬ್ರಹ್ಮರಥೋತ್ಸವ, ವಿಶ್ರಾಂತಿ ಪೂಜೆ, ಚಂದ್ರಮಂಡಲ ಉತ್ಸವ, ವಸಂತ ಪೂಜೆ, ಏಕಾಂತಶಯನ ಪೂಜೆ ನಡೆಯಿತು
ಈ ಸಂದರ್ಭ ದೇವಸ್ಥಾನದ ಅರ್ಚಕವೃಂದ, ಆಡಳಿತ ಮಂಡಳಿಯ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…