ಜನ ಮನದ ನಾಡಿ ಮಿಡಿತ

Advertisement

ಬ್ರಹ್ಮಾವರ: ಲಾರಿ- ಸ್ಕೂಟರ್ ಮಧ್ಯೆ ಭೀಕರ ಅಪಘಾತ; ಸವಾರ ಸ್ಥಳದಲ್ಲೇ ಮೃತ್ಯು

ಉಡುಪಿ: ಬ್ರಹ್ಮಾವರ ತಾಲೂಕಿನ ಉಪ್ಪೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಸಂಜೆ ಲಾರಿ ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಹೇರೂರು ನಿವಾಸಿ ಕೃಷ್ಣ ಗಾಣಿಗ ಎಂದು ಗುರುತಿಸಲಾಗಿದೆ. ಕೃಷ್ಣ ಅವರು ಸಂತೆಕಟ್ಟೆಯಿಂದ ಬ್ರಹ್ಮಾವರಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ರಸ್ತೆ ದುರಸ್ತಿ ಕಾಮಗಾರಿಯಿಂದಾಗಿ ಸಂಚಾರ ವ್ಯತ್ಯಯ ಉಂಟಾದ ಹಿನ್ನೆಲೆಯಲ್ಲಿ ರಸ್ತೆಯನ್ನು ಏಕ ಪಥಕ್ಕೆ ಮಾರ್ಪಾಡುಗೊಳಿಸಲಾಗಿತ್ತು. ದುರದೃಷ್ಟವಶಾತ್ ಎದುರಿನಿಂದ ಬರುತ್ತಿದ್ದ ಲಾರಿಗೆ ಕೃಷ್ಣ ಅವರು ಡಿಕ್ಕಿ ಹೊಡೆದಿದ್ದು, ತೀವ್ರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕೃಷ್ಣ ಅವರು ಉಡುಪಿ ನಗರಸಭೆ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿ ಪ್ರಯಾಣಿಕರು ಪರದಾಡಿದರು.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!