ಬಜ್ಪೆ: ಹೆದ್ದಾರಿಯಲ್ಲಿ ಲಾರಿ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ; ತಪ್ಪಿದ ಅನಾಹುತ
ಮಣ್ಣು ತುಂಬಿಕೊಂಡು ಹೋಗುತ್ತಿದ್ದ ಬೃಹತ್ ಲಾರಿಯೊಂದರ ಬ್ರೇಕ್ ಫೇಲ್ ಆಗಿ ರಸ್ತೆ ಬದಿಯಲ್ಲಿದ್ದ ಅಂಗಡಿಗಳಿಗೆ ಗುದ್ದಿ ಬಳಿಕ ಖಾಸಗಿ ಬಸ್, ಲಾರಿ ಮತ್ತು ಹಲವು ವಾಹನಗಳಿಗೆ ಗುದ್ದಿ ಪಲ್ಟಿಯಾದ ಘಟನೆ ಬಜ್ಪೆ ಎಡಪದವು ಪೇಟೆಯಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮಂಗಳೂರು ಕಡೆಯಿಂದ ಮೂಡಬಿದ್ರೆಗೆ ತೆರಳುತ್ತಿದ್ದ ಲಾರಿಯ ಬ್ರೇಕ್ ಫೇಲ್ ಆಗಿ ಈ ಅವಘಡ ಸಂಭವಿಸಿದೆ.
ಮಂಗಳೂರು ಕಡೆಯಿಂದ ಮೂಡಬಿದ್ರೆಗೆ ತೆರಳುತ್ತಿದ್ದ ಲಾರಿ ಬ್ರೇಕ್ ಫೇಲ್ ಆಗಿದ್ದು, ಚಾಲಕ ನಿಲ್ಲಿಸಲು ಆಗದೆ ಮುಂದೆ ಸಾಗಿದ್ದಾನೆ. ಸುಮಾರು 500 ಮೀಟರ್ ದೂರದ ವರೆಗೂ ಬ್ರೇಕ್ ಸಿಗದೆ ಚಾಲಕ ಲಾರಿಯನ್ನು ನಿಯಂತ್ರಿಸುವ ಪ್ರಯತ್ನ ಮಾಡಿದ್ದಾನೆ. ಆದ್ರೆ ಈ ನಡುವೆ ರಸ್ತೆಯಲ್ಲಿ ಸಿಕ್ಕ ಸ್ವಿಫ್ಟ್ ಕಾರೊಂದಕ್ಕೆ ಲಾರಿ ಡಿಕ್ಕಿ ಹೊಡೆದಿದೆ.
ಈ ಅಪಘಾತದಲ್ಲಿ ಸ್ವಿಫ್ಟ್ ಕಾರು ಸಂಪೂರ್ಣ ಜಖಂ ಗೊಂಡಿದ್ದು, ಕಾರಿನಲ್ಲಿದ್ದವರಿಗೆ ಗಾಯವಾಗಿ ಆಸ್ಪತ್ರೆ ಸೇರಿದ್ದಾರೆ. ಬಳಿಕ ಮುಂದೆ ಚಲಿಸಿದ ಲಾರಿ ಎಣ್ಣೆಯನ್ನು ಪೂರೈಕೆ ಮಾಡುತ್ತಿದ್ದ ಪಿಕ್ಅಫ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಆ ವಾಹನ ಕೂಡಾ ರಸ್ತೆಗೆ ಉರುಳಿ ಬಿದ್ದಿದ್ದು, ರಸ್ತೆಯಲ್ಲಿ ಎಣ್ಣೆ ಪ್ಯಾಕೆಟ್ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಇದೇ ವೇಳೆ ಎದುರಿನಿಂದ ಬಂದ ಟ್ಯಾಂಕರ್ ಒಂದು ಲಾರಿಯನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿ ಬಿದ್ದಿದೆ. ಬಳಿಕ ಎಡಪದವು ಪೇಟೆಯ ಬಳಿ ಬಂದಿದ್ದ ಲಾರಿ ಬಸ್ಗೆ ಡಿಕ್ಕಿ ಹೊಡೆದು ನಿಂತಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…