*ಡಾ.ರಾಮಕೃಷ್ಣ ಶಿರೂರು ಅವರು “ಕರ್ನಾಟಕ ಪ್ರಜಾ ಭೂಷಣ-2024” ಮಾಡಲಾಗಿದೆ ಎಂದು ಶ್ರೀರಂಗಪಟ್ಟಣದ ಸುಮಂಗಲಿ ಸೇವಾ ಟ್ರಸ್ಟ್ ಅಧ್ಯಕ್ಷರಾದ ಶ್ರೀ ಪುಟ್ಟಸ್ವಾಮಿ ಅವರು ತಿಳಿಸಿರುತ್ತಾರೆ. ಏಪ್ರಿಲ್ 28ರಂದು ಮೈಸೂರಿನ ಜೆ.ಎಲ್.ಬಿ. ರಸ್ತೆಯ ರೋಟರಿ ಸಭಾಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಎಂ. ಎ. ಬಿ. ಎಡ್. ಪದವೀಧರರಾದ ಡಾ.ರಾಮಕೃಷ್ಣ ಶಿರೂರು ಹಿಂದಿ ಭಾಷೆಯಲ್ಲಿ ರಾಜಭಾಷ ವಿದ್ವಾನ್ ಪದವಿಯನ್ನು ಪಡೆದಿರುತ್ತಾರೆ. ಇವರು ಮೂಲತ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಮೇಲ್ಪಂಗ್ತಿಯ ಶಾನುಭೋಗರ ಮನೆತನಕ್ಕೆ ಸೇರಿದ ಶ್ರೀ ಭವಾನಿ ಶಂಕರ ಶಾನುಭೋಗ ಮತ್ತು ಶ್ರೀಮತಿ ಸರೋಜಿನಿ ಶಾನುಭೋಗ ಅವರ ಪುತ್ರ. 1994ರಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಶ್ರೀಮಂಗಲ ಪದವಿ ಪೂರ್ವ ಕಾಲೇಜಿನಲ್ಲಿ ಒಂದು ವರ್ಷ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿ, 19 95 ರಿಂದ ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯಲ್ಲಿ ಕನ್ನಡ ಆಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಾ ಬಂದಿದ್ದಾರೆ.ಸಾಹಿತ್ಯ, ಸಂಗೀತ, ಸಾಂಸ್ಕೃತಿಕ ಮತ್ತು ಶಿಕ್ಷಕ ಸಂಘಟನಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡ ಇವರಿಂದ ಮೂಡುಬಿದಿರೆಯಲ್ಲಿ ಇನ್ನಷ್ಟು ಸಾಹಿತ್ಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ಮುಂದುವರೆಯಲಿ ಎಂದು ಸುಮಂಗಲಿ ಸೇವಾ ಟ್ರಸ್ಟ್ ಅಧ್ಯಕ್ಷರಾದ ಶ್ರೀ ಪುಟ್ಟಸ್ವಾಮಿ ಅವರು ಶ್ರೀರಂಗಪಟ್ಟಣದ ಸುಮಂಗಲಿ ಸೇವಾ ಟ್ರಸ್ಟ್ ಪರವಾಗಿ ಡಾ. ರಾಮಕೃಷ್ಣ ಶಿರೂರು ಅವರಿಗೆ ಅಭಿನಂದನೆ ಸಲ್ಲಿಸಿರುತ್ತಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…