ಸುರತ್ಕಲ್: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಅಪಘಾತಕ್ಕೀಡಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಕ್ಕ ಜಂಕ್ಷನ್‌ನಲ್ಲಿ ಶುಕ್ರವಾರ ತಡರಾತ್ರಿ ವರದಿಯಾಗಿದೆ.

ಕಾರು ಮಂಗಳೂರು ವಿಮಾನ ನಿಲ್ದಾಣದಿಂದ ಉಡುಪಿಗೆ ತೆರಳುತ್ತಿತ್ತು. ಈ ವೇಳೆ ಮಳೆಯಾಗುತ್ತಿದ್ದ ಕಾರಣ ಚಾಲಕ ನಿಯಂತ್ರಣ ಕಳೆದುಕೊಂಡು ಹೆದ್ದಾರಿಗೆ ಇಡಲಾಗಿದ್ದ ಬ್ಯಾರಿಕೆಡ್ ಗೆ ಡಿಕ್ಕಿಹೊಡೆದು ಹಲವು ಬಾರಿ ಪಲ್ಟಿಯಾಗಿ ಹೆದ್ದಾರಿ ಪಕ್ಕದ ದಾರಿ ದೀಪದ ಬೃಹತ್ ಕಂಬಕ್ಕೆ ಡಿಕ್ಕಿ ಹೊಡೆದು ಸರ್ವಿಸ್ ರಸ್ತೆಯ ಬದಿಯಲ್ಲಿ ನಿಂತಿದೆ.

ಘಟನೆಯಿಂದ ಕಾರಿನ ಒಳಗೆ ಸಿಲುಕಿದ್ದ ಚಾಲಕನನ್ನು ಸಾರ್ವಜನಿಕರು ಹರಸಾಹಸ ಪಟ್ಟು ಹೊರತೆಗೆದು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಾಲಕ ಅದಾಗಲೇ ಮೃತಪಟ್ಟಿರುವುದಾಗಿ ಆಸ್ಪತ್ರೆಯ ವೈದ್ಯರು ತಿಳಿಸಿದರು ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಹೈವೇ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.



