ಜನ ಮನದ ನಾಡಿ ಮಿಡಿತ

Advertisement

ಮುಕ್ಕ: ಕಾರು ಅಪಘಾತ; ಚಾಲಕ ಮೃತ್ಯು

ಸುರತ್ಕಲ್: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಅಪಘಾತಕ್ಕೀಡಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಕ್ಕ ಜಂಕ್ಷನ್‌ನಲ್ಲಿ ಶುಕ್ರವಾರ ತಡರಾತ್ರಿ ವರದಿಯಾಗಿದೆ.

ಕಾರು ಮಂಗಳೂರು ವಿಮಾನ ನಿಲ್ದಾಣದಿಂದ ಉಡುಪಿಗೆ ತೆರಳುತ್ತಿತ್ತು. ಈ ವೇಳೆ ಮಳೆಯಾಗುತ್ತಿದ್ದ ಕಾರಣ ಚಾಲಕ ನಿಯಂತ್ರಣ ಕಳೆದುಕೊಂಡು ಹೆದ್ದಾರಿಗೆ ಇಡಲಾಗಿದ್ದ ಬ್ಯಾರಿಕೆಡ್ ಗೆ ಡಿಕ್ಕಿಹೊಡೆದು ಹಲವು ಬಾರಿ ಪಲ್ಟಿಯಾಗಿ ಹೆದ್ದಾರಿ ಪಕ್ಕದ ದಾರಿ ದೀಪದ ಬೃಹತ್ ಕಂಬಕ್ಕೆ ಡಿಕ್ಕಿ ಹೊಡೆದು ಸರ್ವಿಸ್ ರಸ್ತೆಯ ಬದಿಯಲ್ಲಿ ನಿಂತಿದೆ.

ಘಟನೆಯಿಂದ ಕಾರಿನ ಒಳಗೆ ಸಿಲುಕಿದ್ದ ಚಾಲಕನನ್ನು ಸಾರ್ವಜನಿಕರು ಹರಸಾಹಸ ಪಟ್ಟು ಹೊರತೆಗೆದು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಾಲಕ ಅದಾಗಲೇ ಮೃತಪಟ್ಟಿರುವುದಾಗಿ ಆಸ್ಪತ್ರೆಯ ವೈದ್ಯರು ತಿಳಿಸಿದರು ಎಂದು ತಿಳಿದು ಬಂದಿದೆ‌.

ಸ್ಥಳಕ್ಕೆ ಹೈವೇ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!