ಬಂಟ್ವಾಳ : ನೇತ್ರಾವತಿ ನದಿಗೆ ಈಜಲು ಹೋದ ಬಾಲಕನೋರ್ವ ನೀರುಪಾಲಾದ ಘಟನೆ ಕಡೇಶ್ವಾಲ್ಯ ಸಮೀಪದ ನೆಚ್ಚಬೆಟ್ಟು ಎಂಬಲ್ಲಿ ಶನಿವಾರ ಸಂಜೆ ವೇಳೆಗೆ ಸಂಭವಿಸಿದೆ.
ಸ್ಥಳೀಯ ನಿವಾಸಿ ಸಹೀರ್ ಎಂಬವರ ಪುತ್ರ ಸುಹೈಲ್ (13) ನೀರುಪಾಲಾದ ಬಾಲಕ. ಕೆಮ್ಮನ್ ಪಳಿಕೆ ಶಾಲೆಯಲ್ಲಿ ಕಲಿಯುತ್ತಿದ್ದ ಈತ 7 ನೇ ತರಗತಿ ತೇರ್ಗಡೆ ಹೊಂದಿದ್ದ.
ನೆಚ್ಚಬೆಟ್ಟು ತನ್ನ ಮನೆ ಸಮೀಪದ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಲ್ಲಿಂದ ಸ್ನೇಹಿತರ ಜೊತೆಗೆ ಪಕ್ಕದ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದು ಆ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.
ನದಿ ದಡದಿಂದ ಬೊಬ್ಬೆ ಕೇಳಿ ಬಂದ ಹಿನ್ನಲೆಯಲ್ಲಿ ಹತ್ತಿರದಲ್ಲೇ ಕ್ರಿಕೆಟ್ ಆಟವಾಡುತ್ತಿದ್ದ ಯುವಕರು ಸುಹೈಲ್ ನನ್ನು ನದಿಯಿಂದ ಮೇಲಕ್ಕೆತ್ತಿದ್ದು ಅದಾಗಲೇ ಆತ ಮೃತಪಟ್ಟಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.
ಮರಣೋತ್ತರ ಪರೀಕ್ಷೆಗೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ. ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…