ಮಂಗಳೂರು:- ಸಕಲ ಜೀವ ರಾಶಿಗಳಿಗೂ ಬದುಕುವ ಹಕ್ಕಿದ್ದು, ಅದನ್ನು ಸಮಾನವಾಗಿ ನೋಡುವ ಚಿಂತನೆ ಜೈನ ಧರ್ಮದಲ್ಲಿ ಒಡಮೂಡಿದೆ. ರಾಜನಾಗಿ ಹುಟ್ಟಿ ಸಕಲವನ್ನೂ ಪರಿತ್ಯಜಿಸಿ ಆತ್ಮ ಸದ್ವಿಚಾರಕ್ಕಾಗಿ ಸತ್ ಚಿಂತನೆಗಳನ್ನು ರೂಢಿಸಿಕೊಂಡ ಭಗವಾನ್ ಮಹಾವೀರರ ತತ್ವಗಳು ಅನುಕರಣನೀಯ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಅಭಿಪ್ರಾಯಪಟ್ಟರು.
ಅವರು ಏ.22 ರ ಸೋಮವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾವೀರ ಜಯಂತಿಯಲ್ಲಿ ಮಾತನಾಡಿದರು.
ಜಿಲ್ಲಾಧಿಕಾರಿಯಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ನಂತರ ವೇಣೂರಿನ ಬಾಹುಬಲಿಯ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ಲಭಿಸಿತು ಎಂದು ಅವರು ಸಂತಸ ವ್ಯಕ್ತಪಡಿಸಿದರು.
ಪ್ರೊಬೇಷನರಿ ಐಎಎಸ್ ಅಧಿಕಾರಿ ಮುಕುಲ್ ಜೈನ್ ಅವರು ಮಾತನಾಡಿ, ಶಾಂತಿ ಸ್ಥಾಪನೆಯಲ್ಲಿ ಜೈನ ಧರ್ಮದ ಪಾತ್ರ ಅತ್ಯಂತ ಪ್ರಮುಖವಾದದ್ದು, ಹಲವು ತತ್ವಗಳನ್ನು ನೀಡಿರುವ ಜೈನ ಧರ್ಮದ ಸಾರವನ್ನು ಅವರು ಈ ಸಂದರ್ಭದಲ್ಲಿ ತಿಳಿಸಿಕೊಟ್ಟರು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ್ ಕೆ., ಪ್ರೊಬೇಷನರಿ ಐಎಎಸ್ ಅಧಿಕಾರಿ ಮುಕುಲ್ ಜೈನ್, ಜೈನ ಸಮಾಜದ ಮುಖಂಡರು, ಪದಾಧಿಕಾರಿಗಳು, ಮಹಾವೀರರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೆ ನೆರವೇರಿಸಿ, ಗೌರವ ಸಮರ್ಪಿಸಿದರು.
ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗೋಕುಲ್ ದಾಸ್ ನಾಯಕ್, ಕೌಶಲ್ಯಾಭಿವೃದ್ಧಿ, ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆಯ ಅಧಿಕಾರಿ ಪ್ರದೀಪ್ ಡಿಸೋಜಾ, ಜೈನ ಸಮಾಜದ ಬಾಂಧವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್. ಜಿ ಸ್ವಾಗತಿಸಿದರು. ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಭಗವಾನ್ ಮಹಾವೀರರ ಜಯಂತಿಯನ್ನು ಆಚರಿಸಲಾಯಿತು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…