ಉಡುಪಿ: ಬೈಕ್ ವೊಂದು ಸ್ಕಿಡ್ ಆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಸೀದಿ ಬಳಿ ಸಂಭವಿಸಿದೆ.
ಕೋಟ ಮಣೂರು ನಿವಾಸಿ ಸುರೇಶ್ ಆಚಾರ್ಯ ಅವರ ಮಗ ವಿಕಾಸ್ ಆಚಾರ್ಯ (22) ಮೃತದುರ್ದೈವಿ. ಇವರು ನಿನ್ನೆ ರಾತ್ರಿ 1:30 ರ ಸುಮಾರಿಗೆ ಸಾಸ್ತಾನ ದಿಂದ ಕೋಟ ಮಣೂರು ಕಡೆ ಬರುತ್ತಿದ್ದರು. ಈ ವೇಳೆ ಕೋಟ ಗುಜಿರಿ ಅಂಗಡಿ ಸಮೀಪ ಬೈಕ್ ನಿಯಂತ್ರಣ ತಪ್ಪಿದ ಪರಿಣಾಮ ಹೆದ್ದಾರಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಗಂಭೀರವಾಗಿ ಗಾಯಗೊಂಡ ಸುರೇಶ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…