ಬಂಟ್ವಾಳ: ಬಿಜೆಪಿಯವರಿಂದ ಜನರಿಗೆ ಮೋಸ ಆಗಿದ್ದು , ಈ ಬಾರಿ ಸಮಗ್ರ ಅಭಿವೃದ್ಧಿಗಾಗಿ ಜನತೆ ಮತ್ತೆ ಕಾಂಗ್ರೇಸ್ ಪಕ್ಷದ ಕೈ ಹಿಡಿಯುತ್ತಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಅವರು ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ಪಕ್ಷದ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಲೋಕಸಭಾ ಅಭ್ಯರ್ಥಿಯಾಗಲು ಅರ್ಹ ವ್ಯಕ್ತಿಯಾಗಿದ್ದು, ಜನರಲ್ಲಿ ಅವರ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತವಾಗಿದೆ. ಸಮಾಜ ಮುಖಿ ಕಾರ್ಯಕ್ರಮಗಳ ಮೂಲಕ ಜನರ ಮನಸ್ಸು ಗೆದ್ದಿದ್ದಾರೆ. ಈ ಬಾರಿ ಪ್ರತಿಯೊಬ್ಬ ವ್ಯಕ್ತಿಯೂ ಪದ್ಮರಾಜ್ ಆರ್ ಪೂಜಾರಿ ಅವರಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಕಾಂಗ್ರೇಸ್ ನ ಸಂಸದರುಗಳಿಂದ ದ.ಕ.ಜಿಲ್ಲೆಯಲ್ಲಿ ಅನೇಕ ಅಭಿವೃದ್ಧಿ ಕೆಲಸಗಳು ನಡೆದಿವೆ. ಬಿಜೆಪಿ ಸಂಸದರುಗಳಿಂದ ಹೇಳಿಕೊಳ್ಳುವಂತಹ ಯಾವದೇ ದೊಡ್ಡ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿ ರಸ್ತೆಗಳು ಬಹುತೇಕ ಕಾಂಗ್ರೆಸ್ ನ ಅವಧಿಯಲ್ಲಿ ನಡೆದಿವೆ.
ವಿಧಾನ ಸಭಾ ಚುನಾವಣಾ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಗ್ಯಾರಂಟಿ ಯೋಜನೆಗಳ ಸವಲತ್ತುಗಳನ್ನು ಜನರಿಗೆ ನೀಡಿದೆ ಎಂದು ಅವರು ಇದೀಗ ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದರೆ ಕೇಂದ್ರದ ಗ್ಯಾರಂಟಿ ಜಾರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನಸಭಾ ಚುನಾವಣೆಯಲ್ಲಿ ಕಳೆದುಕೊಂಡ ಮತವನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮರಳಿಪಡೆಯುತ್ತೇವೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.
ಮೆಲ್ಕಾರ್ ನಿಂದ ಸಜೀಪ ಸುಭಾಷ್ ನಗರದ ವರೆಗೆ ಬೈಕ್ ರ್ಯಾಲಿ ನಡೆದು ಬಳಿಕ ಚುನಾವಣಾ ಬಹಿರಂಗ. ಸಭೆ ನಡೆಯಲಿದೆ ಎಂದು ಅವರು ತಿಳಿಸಿದರು.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಚ ಸುದೀಪ್ ಶೆಟ್ಟಿ, ಪಿಯೂಸ್ ಎಲ್ ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಮಾಯಿಲಪ್ಪ ಸಾಲ್ಯಾನ್, ಶಬೀರ್, ವೆಂಕಪ್ಪ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…